ADVERTISEMENT

ಕೆ.ಆರ್. ಮಾರುಕಟ್ಟೆ | ಮೃತದೇಹ ಪತ್ತೆ: ಕೊಲೆ ಶಂಕೆ

​ಪ್ರಜಾವಾಣಿ ವಾರ್ತೆ
Published 19 ಮೇ 2024, 16:06 IST
Last Updated 19 ಮೇ 2024, 16:06 IST
<div class="paragraphs"><p>&nbsp;ಪ್ರಾತಿನಿಧಿಕ ಚಿತ್ರ</p></div>

 ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಕೆ.ಆರ್. ಮಾರುಕಟ್ಟೆಯ ವಾಣಿಜ್ಯ ಸಂಕೀರ್ಣದ ಬಳಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

‘ಭಾನುವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸ ಗೊತ್ತಾಗಿಲ್ಲ. ಕೊಲೆ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

ADVERTISEMENT

‘ಅಂದಾಜು 30 ವರ್ಷದಿಂದ 35 ವರ್ಷದ ವ್ಯಕ್ತಿಯ ತಲೆಗೆ ತೀವ್ರ ಪೆಟ್ಟಾಗಿದೆ. ಆರೋಪಿಗಳು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದು ಪರಾರಿಯಾಗಿರುವ ಶಂಕೆ ಇದೆ. ಮೃತನ ಫೋಟೊವನ್ನು ಎಲ್ಲ ಠಾಣೆಗಳಿಗೆ ಕಳುಹಿಸಲಾಗಿದ್ದು, ಗುರುತು ಪತ್ತೆ ಮಾಡಲಾಗುತ್ತಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.