ADVERTISEMENT

ಅನುಮಾನಾಸ್ಪದವಾಗಿ ಯುವತಿ ಸಾವು: ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 3 ಜುಲೈ 2024, 16:02 IST
Last Updated 3 ಜುಲೈ 2024, 16:02 IST
<div class="paragraphs"><p>ಸಾವು</p></div>

ಸಾವು

   

– ಸಾಂದರ್ಭಿಕ ಚಿತ್ರ

ಬೆಂಗಳೂರು: ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬಾಗಲಗುಂಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ADVERTISEMENT

‘ಮೃತ ಯುವತಿಯನ್ನು ದಾಸರಹಳ್ಳಿಯ ನಿವಾಸಿ ಶ್ರಾವಣಿ (23) ಎಂದು ಗುರುತಿಸಲಾಗಿದೆ. ಶ್ರಾವಣಿ ಅವರು ದಾವಣಗೆರೆ ಜಿಲ್ಲೆಯವರಾಗಿದ್ದಾರೆ. ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು, ಈ ಬಗ್ಗೆ ಬಾಗಲಗುಂಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಬಾಗಲಗುಂಟೆ ಪೊಲೀಸ್‌ ಠಾಣೆ ವ್ಯಾಪ್ತಿಯ 8ನೇ ಮೈಲಿಯಲ್ಲಿರುವ ಗೋಲ್ಡನ್‌ ಜಿಮ್‌ನಲ್ಲಿ ಶ್ರಾವಣಿ ಅವರು ಸ್ವಾಗತಿಕಾರಣಿಯಾಗಿ ಕೆಲಸ ಮಾಡುತ್ತಿದ್ದರು. ಸೋಮವಾರ ಬೆಳಿಗ್ಗೆ ಎಂದಿನಂತೆ ಕೆಲಸಕ್ಕೆ ತೆರಳಿದ್ದ ಅವರು, ಜಿಮ್‌ಗೆ ಬಂದ ಸ್ವಲ್ಪ ಸಮಯದಲ್ಲಿ ಅಸ್ವಸ್ಥರಾಗಿ ವಾಂತಿ ಮಾಡಿಕೊಳ್ಳಲು ಪ್ರಾರಂಭಿಸಿದರು. ಜಿಮ್‌ನಲ್ಲಿದ್ದ ಸಿಬ್ಬಂದಿ ಶ್ರಾವಣಿ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಅವರು ಆಸ್ಪತ್ರೆಯಲ್ಲಿಯೇ ಮೃತಪಟ್ಟರು’ ಎಂದರು.

‘ಇತ್ತೀಚೆಗೆ ಶ್ರಾವಣಿ ಅವರಿಗೆ ಮದುವೆ ಮಾಡಲು ಪೋಷಕರು ಸಿದ್ಧತೆ ನಡೆಸುತ್ತಿದ್ದರು. ಆದರೆ, ಅವರಿಗೆ ಮದುವೆ ಮಾಡಿಕೊಳ್ಳಲು ಇಷ್ಟವಿಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪ್ರಾಥಮಿಕ ತನಿಖೆ ತಿಳಿದುಬಂದಿದೆ. ಈ ಬಗ್ಗೆ ಬಾಗಲಗುಂಟೆ ಪೊಲೀಸ್‌ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಕಳಿಸಲಾಗಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.