ADVERTISEMENT

ಮಳೆ ಪ್ರಮಾಣ ಇಳಿಮುಖ

​ಪ್ರಜಾವಾಣಿ ವಾರ್ತೆ
Published 10 ಜುಲೈ 2024, 16:31 IST
Last Updated 10 ಜುಲೈ 2024, 16:31 IST
ಮಳೆ
ಮಳೆ   

ಬೆಂಗಳೂರು: ಒಂದು ವಾರದಿಂದ ಕರಾವಳಿ, ಮಳೆನಾಡಿನಲ್ಲಿ ಭಾರಿ ಪ್ರಮಾಣದಲ್ಲಿ ಸುರಿಯುತ್ತಿದ್ದ ಮಳೆ ಬುಧವಾರ ಇಳಿಮುಖವಾಗಿದೆ. ಮುಂದಿನ ಎರಡು ದಿನಗಳು ಸಾಧಾರಣ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರಿಯಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ 30ರಿಂದ 40 ಕಿಲೋಮೀಟರ್‌ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು ಸಹಿತ ಮಳೆ ಸುರಿಯಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬೀದರ್‌, ಕಲಬುರಗಿ, ಯಾದಗಿರಿಯ ಜಿಲ್ಲೆಗಳ ಹಲವೆಡೆ ಮಳೆಯಾಗಲಿದೆ.

ಮಳೆ ಪ್ರಮಾಣ: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ 5 ಸೆಂ.ಮೀ. ಮಳೆಯಾಗಿರುವುದೇ ರಾಜ್ಯದಲ್ಲಿ 24 ಗಂಟೆಗಳಲ್ಲಿ ದಾಖಲಾದ ಅತಿಹೆಚ್ಚಿನ ಮಳೆ ಪ್ರಮಾಣವಾಗಿದೆ. ಮಂಗಳೂರು ವಿಮಾನ ನಿಲ್ದಾಣ, ಮಂಗಳೂರು, ಮಾಣಿ, ಪಣಂಬೂರು, ಧರ್ಮಸ್ಥಳ, ಬೆಳ್ತಂಗಡಿ, ಉಡುಪಿ ಜಿಲ್ಲೆಯ ಕೋಟ, ಉಡುಪಿ, ಕಾರ್ಕಳ, ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ, ಕಳಸದಲ್ಲಿ 3 ಸೆಂ.ಮೀ. ಮಳೆ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.