ಬೆಂಗಳೂರು: ಕಳೆದ ವರ್ಷದ ದೀಪಾವಳಿ ಸಂದರ್ಭಕ್ಕೆ ಹೋಲಿಸಿದರೆ, ಈ ಬಾರಿ ದೀಪಾವಳಿ ವೇಳೆ ನಗರದಲ್ಲಿನ ವಾಯುಮಾಲಿನ್ಯ ಪ್ರಮಾಣ ಕಡಿಮೆಯಾಗಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಹೇಳಿದೆ.
ಈ ಕುರಿತು ಬುಧವಾರ ದತ್ತಾಂಶ ಬಿಡುಗಡೆ ಮಾಡಿರುವ ಕೆಎಸ್‌ಪಿಸಿಬಿ, ಕಳೆದ ವರ್ಷಕ್ಕೆ ಹೋಲಿಸಿದರೆ, ಗಾಳಿ ಗುಣಮಟ್ಟ ಸೂಚ್ಯಂಕ (ಎಕ್ಯೂಐ) ಶೇ 26.7ರಷ್ಟು ಕಡಿಮೆಯಾಗಿದೆ ಎಂದು ಹೇಳಿದೆ.
‘ಹಬ್ಬದ ಸಂದರ್ಭದಲ್ಲಿಯೇ ಮಳೆ ಬಂದಿದ್ದರಿಂದ ಹೆಚ್ಚು ಜನರಿಗೆ ಪಟಾಕಿ ಹೊಡೆಯಲು ಸಾಧ್ಯವಾಗಿಲ್ಲ. ಮಾಲಿನ್ಯ ಪ್ರಮಾಣ ಕಡಿಮೆಯಾಗಲು ಇದೇ ಪ್ರಮುಖ ಕಾರಣ’ ಎಂದು ಮಂಡಳಿಯ ಕಾರ್ಯದರ್ಶಿ ಬಸವರಾಜ ಪಾಟೀಲ ತಿಳಿಸಿದರು.
ನಗರದ ಏಳು ಕಡೆಗಳಲ್ಲಿ ನಿರ್ಮಿಸಲಾಗಿರುವ ವಾಯುಮಾಲಿನ್ಯ ಮಾಪನ ಕೇಂದ್ರಗಳಲ್ಲಿ ಕಳೆದ ಮೂರು ದಿನಗಳಲ್ಲಿ ದಾಖಲಾದ ದತ್ತಾಂಶಗಳನ್ನು ಅವರು ಬಿಡುಗಡೆಗೊಳಿಸಿದರು.
ದೀಪಾವಳಿ ಸಂದರ್ಭದಲ್ಲಿ ನಗರದಲ್ಲಿನ ಮಾಲಿನ್ಯ ಪ್ರಮಾಣ (ಎಕ್ಯೂಐ)
ಪ್ರದೇಶ;2018;2019
ನಗರ ರೈಲು ನಿಲ್ದಾಣ;129;111
ಬಸವೇಶ್ವರ ನಗರ;81;85
ಜಯನಗರ 5ನೇ ಹಂತ;143;71
ಹೆಬ್ಬಾಳ;113.6;90
ಮೈಸೂರು ರಸ್ತೆ;127.7;76
ನಿಮ್ಹಾನ್ಸ್;89.3;69
ಸೆಂಟ್ರಲ್ ಸಿಲ್ಕ್‌ಬೋರ್ಡ್;93;67
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.