ADVERTISEMENT

ದೋಷಪೂರಿತ ನೋಂದಣಿ ಫಲಕ: 1.13 ಲಕ್ಷ ಚಾಲಕರ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 2 ಜನವರಿ 2024, 14:37 IST
Last Updated 2 ಜನವರಿ 2024, 14:37 IST
   

ಬೆಂಗಳೂರು: ದೋಷಪೂರಿತ ನೋಂದಣಿ ಫಲಕ ಹಾಗೂ ನೋಂದಣಿ ಫಲಕವಿಲ್ಲದೆ ವಾಹನ ಚಾಲನೆ ಮಾಡುತ್ತಿದ್ದ ಬೈಕ್‌ ಸವಾರರು ಹಾಗೂ ವಾಹನ ಚಾಲಕರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಕ್ರಿಮಿನಲ್‌ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ನಗರ ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.

ನೋಂದಣಿ ಫಲಕವಿಲ್ಲದೆ ವಾಹನ ಚಾಲನೆ ಮಾಡುತ್ತಿದ್ದ 1,535 ಮಂದಿ ಹಾಗೂ ದೋಷಪೂರಿತ ನೋಂದಣಿ ಫಲಕ ಅಳವಡಿಸಿಕೊಂಡು ಚಾಲನೆ ಮಾಡುತ್ತಿದ್ದ 1,13,517 ಮಂದಿಯನ್ನು ಪತ್ತೆ ಮಾಡಿ, ಪ್ರಕರಣ ದಾಖಲು ಮಾಡಲಾಗಿದೆ. ಅದರಲ್ಲಿ 22 ಮಂದಿಯ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗಿದೆ.

ನೋಂದಣಿ ಫಲಕಗಳನ್ನು ಉದ್ದೇಶಪೂರ್ವಕವಾಗಿ ಮರೆಮಾಚಿ ಸಂಚಾರ ನಿಯಮ ಉಲ್ಲಂಘಿಸುತ್ತಿರುವ ಚಾಲಕರ ವಿರುದ್ಧ ವಿಶೇಷ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.