ಬೆಂಗಳೂರು: ಬಿ.ಆರ್. ಅಂಬೇಡ್ಕರ್ ಅವರ 150 ಅಡಿ ಎತ್ತರದ ಪ್ರತಿಮೆಯನ್ನು ನಗರದಲ್ಲಿ ನಿರ್ಮಿಸಬೇಕು ಎಂದು ಆನೇಕಲ್ ಅಂಬೇಡ್ಕರ್ ಯುವಕರ ಸಂಘ ಆಗ್ರಹಿಸಿದೆ.
ಅಸ್ಪೃಶ್ಯತೆ, ಅಸಮಾನತೆ, ಅನ್ಯಾಯ, ಕಂದಾಚಾರ, ದೌರ್ಜನ್ಯ, ದಬ್ಬಾಳಿಕೆಗಳಿಂದ ಕೂಡಿದ್ದ ಸಮಾಜಕ್ಕೆ ಸಮಾನತೆಯ ಸಂವಿಧಾನವನ್ನು ನೀಡಿ ದೇಶದ ಗೌರವ ಹೆಚ್ಚಿಸಿದ ಅಂಬೇಡ್ಕರ್ ಅವರ ಪ್ರತಿಮೆಯನ್ನು ನಿರ್ಮಿಸಲು ಸರ್ಕಾರ ಸೂಕ್ತ ಜಾಗವನ್ನು ಗುರುತಿಸಿ, ಕ್ರಮ ಕೈಗೊಳ್ಳಬೇಕು ಎಂದು ಸಂಘದ ಅಧ್ಯಕ್ಷ ಎಂ. ಕೃಷ್ಣಪ್ಪ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಆಗ್ರಹಿಸಿದರು.
ತೆಲಂಗಾಣದಲ್ಲಿ 120 ಅಡಿ ಎತ್ತರದ ಪ್ರತಿಮೆ ಅನಾವರಣ ಮಾಡಿರುವುದು ಹೆಮ್ಮೆಯ ವಿಚಾರ. ಅದಕ್ಕಿಂತ ಎತ್ತರದ ಪ್ರತಿಮೆಯನ್ನು ಬೆಂಗಳೂರಿನಲ್ಲಿ ನಿರ್ಮಾಣಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಂಘದ ಮಹಿಳಾ ಅಧ್ಯಕ್ಷೆ ಬೊಮ್ಮಸಂದ್ರ ರೇಣುಕಾ, ಉಪಾಧ್ಯಕ್ಷ ಮಣಿಗಾನಹಳ್ಳಿ ವಿ. ಶ್ರೀನಿವಾಸ, ಪ್ರಧಾನ ಕಾರ್ಯದರ್ಶಿ ರವಿಚಂದ್ರ ಎಸ್., ಮೀಸೆರಾಮಣ್ಣ, ಮುನಿರಾಜಣ್ಣ, ಶೇಖ್ ರಿಜ್ವಾನ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.