ADVERTISEMENT

ಡೆಂಗಿ: 197 ಪ್ರಕರಣ ದೃಢ, ಒಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 8 ಜುಲೈ 2024, 16:03 IST
Last Updated 8 ಜುಲೈ 2024, 16:03 IST
ಈಡಿಸ್ ಸೊಳ್ಳೆ
ಈಡಿಸ್ ಸೊಳ್ಳೆ   

ಬೆಂಗಳೂರು: ರಾಜ್ಯದಲ್ಲಿ ಸೋಮವಾರ 197 ಡೆಂಗಿ ಪ್ರಕರಣಗಳು ದೃಢಪಟ್ಟಿದ್ದು, ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಒಬ್ಬರು ಮೃತಪಟ್ಟಿದ್ದು, ಈವರೆಗೆ ಡೆಂಗಿ ಪೀಡಿತರಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೇರಿದೆ.

ಡೆಂಗಿ ಪತ್ತೆ ಸಂಬಂಧ 24 ಗಂಟೆಗಳ ಅವಧಿಯಲ್ಲಿ 892 ಪರೀಕ್ಷೆಗಳನ್ನು ನಡೆಸಲಾಗಿತ್ತು. ಹೊಸದಾಗಿ ಡೆಂಗಿ ಪೀಡಿತರಾದವರಲ್ಲಿ ಒಂದು ವರ್ಷದೊಳಗಿನ ಒಂದು ಮಗು, 18 ವರ್ಷದೊಳಗಿನ 63 ಮಂದಿ ಹಾಗೂ 18 ವರ್ಷ ದಾಟಿದ 133 ಮಂದಿ ಸೇರಿದ್ದಾರೆ. 

ADVERTISEMENT

ಸದ್ಯ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ 303 ಡೆಂಗಿ ರೋಗಿಗಳು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ವರ್ಷ ವರದಿಯಾದ ಒಟ್ಟು ಡೆಂಗಿ ಪ್ರಕರಣಗಳ ಸಂಖ್ಯೆ 7,362ಕ್ಕೆ ಏರಿಕೆಯಾಗಿದೆ. 

ಬಿಬಿಎಂಪಿ ವ್ಯಾಪ್ತಿಯಲ್ಲಿ ಹೊಸದಾಗಿ 95 ಪ್ರಕರಣಗಳು ದೃಢಪಟ್ಟಿವೆ. ಇದರಿಂದಾಗಿ ಒಟ್ಟು ಪ್ರಕರಣಗಳ ಸಂಖ್ಯೆ 2,083ಕ್ಕೆ ತಲುಪಿದೆ. ಡೆಂಗಿ ಪೀಡಿತರಲ್ಲಿ ಸದ್ಯ 135 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.