ADVERTISEMENT

ಡೆಂಗಿ: ಚಿಕಿತ್ಸೆಗೆ 5 ಆಸ್ಪತ್ರೆಯಲ್ಲಿ ಹಾಸಿಗೆ ಮೀಸಲು

​ಪ್ರಜಾವಾಣಿ ವಾರ್ತೆ
Published 17 ಜುಲೈ 2024, 16:29 IST
Last Updated 17 ಜುಲೈ 2024, 16:29 IST
.
.   

ಬೆಂಗಳೂರು: ನಗರದಲ್ಲಿ ಡೆಂಗಿ ಪ್ರಕರಣಗಳು ಏರಿಕೆಯಾಗುತ್ತಿರುವುದರಿಂದ ಈ ಜ್ವರ ಪೀಡಿತರ ಚಿಕಿತ್ಸೆಗೆ ಆರೋಗ್ಯ ಇಲಾಖೆಯು ಐದು ಆಸ್ಪತ್ರೆಗಳನ್ನು ಗುರುತಿಸಿ, ಹಾಸಿಗೆಗಳನ್ನು ಮೀಸಲಿಡುವಂತೆ ಸೂಚಿಸಿದೆ. 

ಕೆ.ಸಿ.ಜನರಲ್ ಆಸ್ಪತ್ರೆ, ಸರ್.ಸಿ.ವಿ. ರಾಮನ್ ಸಾರ್ವಜನಿಕ ಆಸ್ಪತ್ರೆ ಹಾಗೂ ಜಯನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ತಲಾ 25 ಹಾಸಿಗೆಗಳನ್ನು ಮೀಸಲಿಡಲು ಸೂಚಿಸಲಾಗಿದೆ. ಯಲಹಂಕ ತಾಲ್ಲೂಕು ಆಸ್ಪತ್ರೆ ಮತ್ತು ಕೆ.ಆರ್.ಪುರ ತಾಲ್ಲೂಕು ಆಸ್ಪತ್ರೆಯಲ್ಲಿ ತಲಾ 10 ಹಾಸಿಗೆಗಳನ್ನು ಡೆಂಗಿ ಪೀಡಿತರ ಚಿಕಿತ್ಸೆಗೆ ಇರಿಸಲು ತಿಳಿಸಲಾಗಿದೆ. 

ಡೆಂಗಿ ಪೀಡಿತರಿಗೆ ನಿಗದಿತ ಸಮಯದಲ್ಲಿ ಆರೈಕೆ ಮತ್ತು ಚಿಕಿತ್ಸೆ ನೀಡುವ ಮೂಲಕ ಸಾವುಗಳನ್ನು ತಡೆಗಟ್ಟಬಹುದಾಗಿದೆ. ಪರಿಣಾಮಕಾರಿ ನಿರ್ವಹಣೆ ಮತ್ತು ನಿರ್ಣಾಯಕ ಚಿಕಿತ್ಸೆ ಒದಗಿಸಲು ಮುಂದಿನ ಆದೇಶದವರೆಗೂ ಹಾಸಿಗೆಗಳನ್ನು ಮೀಸಲಿಡಬೇಕು ಎಂದು ಸೂಚಿಸಲಾಗಿದೆ.

ADVERTISEMENT

ಸದ್ಯ 171 ಡೆಂಗಿ ಪೀಡಿತರು ನಗರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪ‍ಡೆದುಕೊಳ್ಳುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.