ಬೆಂಗಳೂರು: ‘ಅಲೆಮಾರಿ ಸಮುದಾಯದ ಶ್ರೇಯೋಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ’ ಎಂದು ಸಚಿವ ಸತೀಶ್ ಜಾರಕಿಹೊಳಿ ಭರವಸೆ ನೀಡಿದರು.
ನಗರದಲ್ಲಿ ಶುಕ್ರವಾರ ಕರ್ನಾಟಕ ಎಸ್‌ಸಿ, ಎಸ್‌ಟಿ ಅಲೆಮಾರಿ, ವಿಮುಕ್ತ ಬುಡಕಟ್ಟು ಸಂಘಟನೆಗಳ ಒಕ್ಕೂಟದಿಂದ ಆಯೋಜಿಸಿದ್ದ ಅಲೆಮಾರಿ ಸಮುದಾಯಗಳ ರಾಜ್ಯಮಟ್ಟದ ಬೃಹತ್ ಜಾಗೃತಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
‘ಸರ್ಕಾರ ಶೋಷಿತ ಸಮುದಾಯಗಳ ಅಭಿವೃದ್ಧಿಗೆ ಸದಾ ಶ್ರಮಿಸುತ್ತದೆ. ಸರ್ಕಾರದ ಗ್ಯಾರಂಟಿ ಮತ್ತು ಜನಪರ ಯೋಜನೆಗಳನ್ನು ಶೋಷಿತ ಸಮುದಾಯ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದರು.
ಸಮಾವೇಶದಲ್ಲಿ ಅಲೆಮಾರಿಗಳಿಗೆ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಮುಂದುವರಿಯಲು ಜಾತಿ ಪ್ರಮಾಣ ಪತ್ರ ಸಮಸ್ಯೆ ನಿವಾರಿಸಬೇಕು. ಬಜೆಟ್‌ನಲ್ಲಿ ಘೋಷಿಸಿರುವ ‘ಅಲೆಮಾರಿ ಆಯೋಗ’ವನ್ನೂ ಕೂಡಲೇ ಅನುಷ್ಠಾನಕ್ಕೆ ತರಬೇಕು. ಎಸ್‌ಸಿ, ಎಸ್‌ಟಿ, ಒಬಿಸಿ ಅಲೆಮಾರಿ ಸಮುದಾಯಗಳು ಒಳಗೊಂಡಂತೆ ‘ಶಾಶ್ವತ ಆಯೋಗ’ ರಚನೆ ಮಾಡಬೇಕು’ ಎಂಬ ನಿರ್ಣಯ ಕೈಗೊಳ್ಳಲಾಯಿತು.
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್‌ದಾಸ್, ಸಂಘದ ಅಧ್ಯಕ್ಷ ಆದರ್ಶ ಯಲ್ಲಪ್ಪ, ಎಸ್‌ಸಿ–ಎಸ್‌ಟಿ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಪಲ್ಲವಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.