ಬೆಂಗಳೂರು: ‘ಬುಕ್‌ಬ್ರಹ್ಮ’ ಸಹಯೋಗದಲ್ಲಿ ವಿನಾಯಕ ಗೋಕಾಕ ವಾಙ್ಮಯ ಟ್ರಸ್ಟ್ ವಿನಾಯಕ ಕೃಷ್ಣ ಗೋಕಾಕರ ಪುಣ್ಯ ಸ್ಮರಣೆಯನ್ನು ಸಮನ್ವಯ ದಿನವನ್ನಾಗಿ ಆಚರಿಸುತ್ತಿದ್ದು, ಇದೇ ಭಾನುವಾರ ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಗೋಕಾಕರ ಬಗ್ಗೆ ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಬುಕ್‌ಬ್ರಹ್ಮ ಜಾಲತಾಣದಲ್ಲಿ ಕಾರ್ಯಕ್ರಮಗಳು ಪ್ರಸಾರವಾಗಲಿವೆ. ಈ ಬಾರಿ ‘ಡಿಜಿಟಲ್ ಫೆಲೋಶಿಪ್’ ಎಂಬ ಯೋಜನೆಯೊಂದನ್ನು ಆರಂಭಿಸಲಾಗುತ್ತಿದೆ. ಈಗ ಜ್ಞಾನವು ಬೆರಳ ತುದಿಯಲ್ಲಿಯೇ ಸಿಗುತ್ತಿದೆ. ಪ್ರಪಂಚ ಹತ್ತಿರವಾಗುತ್ತಿದೆ. ಆಧುನಿಕ ತಂತ್ರಜ್ಞಾನವು ಹಲವು ಹೊಸ ಅವಕಾಶಗಳನ್ನು ತೆರೆದಿಟ್ಟಿವೆ. ಯುವ ಸಮುದಾಯ ಈ ತಂತ್ರಜ್ಞಾನವನ್ನು ಬಳಸಿಕೊಂಡರೆ ಅಪೂರ್ವವಾದ ಕೆಲಸಗಳನ್ನು ಮಾಡಬಹುದು. ಈ ನಿಟ್ಟಿನಲ್ಲಿ ಗೋಕಾಕರ ಸಾಹಿತ್ಯ ಮತ್ತು ವ್ಯಕ್ತಿತ್ವವನ್ನು ಆಧುನಿಕ ವೇದಿಕೆಯಲ್ಲಿ ಪ್ರಸ್ತುತಪಡಿಸಲು ಡಿಜಿಟಲ್ ಫೆಲೋಶಿಪ್ ನೀಡಲಾಗುತ್ತದೆ ಎಂದು ಟ್ರಸ್ಟ್ ಅಧ್ಯಕ್ಷ ನರಹಳ್ಳಿ ಬಾಲಸುಬ್ರಹ್ಮಣ್ಯ ತಿಳಿಸಿದ್ದಾರೆ.
ಮೊದಲ ಫೆಲೋಶಿಪ್ ಅನ್ನು ಉಜಿರೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಸುಮಂತ ಅವರಿಗೆ ನೀಡಿ, ಗೋಕಾಕರನ್ನು ಕುರಿತು ಸಾಕ್ಷ್ಯಚಿತ್ರ ನಿರ್ಮಿಸಲು ಪ್ರೋತ್ಸಾಹಿಸುತ್ತಿದ್ದೇವೆ. ಇಂಥ ಹಲವು ಯೋಜನೆಗಳ ಮುಖಾಂತರ ಕನ್ನಡವನ್ನು ಕಟ್ಟುವ ಕೆಲಸದಲ್ಲಿ ಟ್ರಸ್ಟ್ ತೊಡಗಿಸಿಕೊಂಡಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.