ಬೆಂಗಳೂರು: ಕರ್ನಾಟಕ ರಾಜ್ಯ ಎಸ್ಸಿ, ಎಸ್ಟಿ ಪತ್ರಿಕಾ ಸಂಪಾದಕರ ಸಂಘ ನೀಡುವ 2022–23ನೇ ಸಾಲಿನ ‘ಬಿ.ರಾಚಯ್ಯ ದತ್ತಿನಿಧಿ ವಾರ್ಷಿಕ ಪ್ರಶಸ್ತಿ’ಗೆ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅವರನ್ನು ಆಯ್ಕೆ ಮಾಡಲಾಗಿದೆ.
ಈ ಪ್ರಶಸ್ತಿಯು ₹10 ಸಾವಿರ ನಗದು ಒಳಗೊಂಡಿದೆ. ಸುದ್ದಿ ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡದ (ಎಸ್‌ಟಿ) ಮೂವರು ಹಿರಿಯ ಸಂಪಾದಕರಿಗೆ ನೀಡುವ ‘ವಾರ್ಷಿಕ ಪ್ರಶಸ್ತಿ’ಯನ್ನೂ ಘೋಷಿಸಿದ್ದು, ಕೋಲಾರದ ಸಿ. ಮುನಿಯಪ್ಪ, ಚಿತ್ರದುರ್ಗದ ಮೈಲಾರಪ್ಪ ಮತ್ತು ಬೀದರ್‌ನ ಮಾಳಪ್ಪ ಅಡಸಾರೆ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯು ತಲಾ ₹ 5 ಸಾವಿರ ನಗದು ಒಳಗೊಂಡಿದೆ.
ಇದೇ ತಿಂಗಳ ಕೊನೆಯ ವಾರ ಬೆಂಗಳೂರಿನಲ್ಲಿ ನಡೆಯಲಿರುವ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ಅಧ್ಯಕ್ಷ ಚೆಲುವರಾಜು ಮತ್ತು ಪ್ರಧಾನ ಕಾರ್ಯದರ್ಶಿ ಸೋಮಶೇಖರ ಕೆರಗೋಡು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.