ADVERTISEMENT

ಆರ್.ಆರ್‌. ನಗರ: ನಿತ್ಯಾನಂದ ನಗರ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2024, 14:11 IST
Last Updated 26 ಅಕ್ಟೋಬರ್ 2024, 14:11 IST
ಕೆ.ಗೊಲ್ಲಹಳ್ಳಿ ಪಂಚಾಯಿತಿ ವ್ಯಾಪ್ತಿಯ ನಿತ್ಯಾನಂದ ನಗರದ ನಿವಾಸಿಗಳಿಗೆ ಶಾಸಕ ಎಸ್.ಟಿ.ಸೋಮಶೇಖರ್ ಅವರು ಹಕ್ಕು ಪತ್ರಗಳನ್ನು ವಿತರಿಸಿದರು. ಪಂಚಾಯಿತಿ ಸದಸ್ಯೆ ಕಲಾವತಿ ಮಂಜುನಾಥ್, ಮಾಜಿ ಅಧ್ಯಕ್ಷ ಕೆ.ಮಹೇಶ್ ಇದ್ದಾರೆ
ಕೆ.ಗೊಲ್ಲಹಳ್ಳಿ ಪಂಚಾಯಿತಿ ವ್ಯಾಪ್ತಿಯ ನಿತ್ಯಾನಂದ ನಗರದ ನಿವಾಸಿಗಳಿಗೆ ಶಾಸಕ ಎಸ್.ಟಿ.ಸೋಮಶೇಖರ್ ಅವರು ಹಕ್ಕು ಪತ್ರಗಳನ್ನು ವಿತರಿಸಿದರು. ಪಂಚಾಯಿತಿ ಸದಸ್ಯೆ ಕಲಾವತಿ ಮಂಜುನಾಥ್, ಮಾಜಿ ಅಧ್ಯಕ್ಷ ಕೆ.ಮಹೇಶ್ ಇದ್ದಾರೆ   

ರಾಜರಾಜೇಶ್ವರಿ ನಗರ: ಕೆ.ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿತ್ಯಾನಂದ ನಗರ ನಿವಾಸಿಗಳಿಗೆ ಶಾಸಕ ಎಸ್.ಟಿ.ಸೋಮಶೇಖರ್ ಅವರು ಹಕ್ಕುಪತ್ರಗಳನ್ನು ವಿತರಿಸಿದರು.

ಮಾಗಡಿ ರಸ್ತೆಯ ಬಿ.ಇ.ಎಲ್ ಬಡಾವಣೆಯ ಶಾಸಕರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿ ಮಾತನಾಡಿದ ಅವರು, ‘ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟಿಕೊಂಡು ವಾಸಿಸುವ ಎಲ್ಲರಿಗೂ 94 ಸಿಸಿ ಅಡಿಯಲ್ಲಿ ಹಕ್ಕುಪತ್ರ ನೀಡಲು ಕಾನೂನು ಜಾರಿಗೆ ತಂದ ಪರಿಣಾಮ ಯಶವಂತಪುರ ಕ್ಷೇತ್ರದ ಸಾವಿರಾರು ಕುಟುಂಬಗಳಿಗೆ ಹಕ್ಕುಪತ್ರ ಮತ್ತು ಸ್ವಾಧೀನ ಪತ್ರಗಳನ್ನು ನೀಡಲಾಗಿದೆ. ಕೆಲವೆಡೆ ಕಾನೂನು ತೊಡಕಿನಿಂದ ವಿಳಂಬವಾಗಿತ್ತು. ಅವರಿಗೂ ಸಹ ಹಕ್ಕು ಪತ್ರ ನೀಡಲಾಗುವುದು’ ಎಂದು ಹೇಳಿದರು.  

‘ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ಇಲ್ಲದ ಕಡುಬಡವರಿಗೆ ಉಚಿತ ನಿವೇಶನಗಳನ್ನು ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.  ಮನೆಗಳನ್ನು(ವಸತಿ) ಸಹ ನೀಡಲಾಗುವುದು. ಮಂಚನಬೆಲೆ ಜಲಾಶಯದಿಂದ ಎಲ್ಲಾ ಗ್ರಾಮಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವ ಕಾಮಗಾರಿ ಪ್ರಗತಿಯಲ್ಲಿದೆ. ನನಗೆ ಕ್ಷೇತ್ರದ ಅಭಿವೃದ್ಧಿ ಮುಖ್ಯವೇ ಹೊರತು ರಾಜಕೀಯ ಅಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮನವೊಲಿಸಿ, ಅನುದಾನ ತರುತ್ತೇನೆ’ ಎಂದರು.

ADVERTISEMENT

ಪಂಚಾಯಿತಿ ಸದಸ್ಯೆ ಕಲಾವತಿ ಮಂಜುನಾಥ್, ಮಾಜಿ ಅಧ್ಯಕ್ಷ ಕೆ.ಮಹೇಶ್ ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.