ADVERTISEMENT

10 ಸಾವಿರ ವಿದ್ಯಾರ್ಥಿಗಳಿಗೆ ಒಂದು ಲಕ್ಷ ಪುಸ್ತಕಗಳ ವಿತರಣೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2019, 19:42 IST
Last Updated 19 ಜೂನ್ 2019, 19:42 IST

ಬೆಂಗಳೂರು: ‘ರಕ್ಷಾ ಫೌಂಡೇಷನ್ ವತಿಯಿಂದಇದೇ 22ರಂದು ಬೆಳಿಗ್ಗೆ 10 ಗಂಟೆಗೆ 10 ಸಾವಿರ ವಿದ್ಯಾರ್ಥಿಗಳಿಗೆ ಒಂದು ಲಕ್ಷ ಪುಸ್ತಕಗಳ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಸಂಸ್ಥೆಯ ಸ್ಥಾಪಕಸಿ.ಕೆ.ರಾಮಮೂರ್ತಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ, ದ್ವಿತೀಯಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಅಂಗವಿಕಲ ವಿದ್ಯಾರ್ಥಿಗಳಿಗೆಕಂಪ್ಯೂಟರ್‌ ವಿತರಿಸಲಾಗುವುದು. 30 ಶಾಲೆಗಳಿಗೆ ಗಡಿಯಾರ ವಿತರಿಸಲಾಗುವುದು’ ಎಂದರು.

ಕಾರ್ಯಕ್ರಮವನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರುಉದ್ಘಾಟಿಸಲಿದ್ದಾರೆ.

ADVERTISEMENT

ಸ್ಥಳ: ಚಂದ್ರಗುಪ್ತಮೌರ್ಯ(ಶಾಲಿನಿ)ಆಟದಮೈದಾನ, ಜಯನಗರ 5ನೇಬಡಾವಣೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.