ADVERTISEMENT

ರಾಮನಗರ, ಬನ್ನೇರುಘಟ್ಟದಲ್ಲಿ ಕಾಡಾನೆಗಳ ಹಾವಳಿ ತಡೆಯಲು ಜಿಲ್ಲಾ ಆನೆ ಕಾರ್ಯಪಡೆ ರಚನೆ

​ಪ್ರಜಾವಾಣಿ ವಾರ್ತೆ
Published 1 ಜುಲೈ 2023, 19:20 IST
Last Updated 1 ಜುಲೈ 2023, 19:20 IST
   

ಬೆಂಗಳೂರು: ರಾಮನಗರ ಮತ್ತು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ಕಾಡಾನೆಗಳ ಹಾವಳಿಯನ್ನು ತಡೆಗಟ್ಟಲು ಜಿಲ್ಲಾ ಆನೆ ಕಾರ್ಯಪಡೆಯನ್ನು ರಚಿಸಲಾಗಿದೆ.

ಒಬ್ಬರು ವಲಯ ಅರಣ್ಯಾಧಿಕಾರಿ, ಇಬ್ಬರು ಉಪ ವಲಯ ಅರಣ್ಯ ಅಧಿಕಾರಿಗಳು, 5 ಅರಣ್ಯ ರಕ್ಷಕರು, 24 ಹೊರಗುತ್ತಿಗೆ ಸಿಬ್ಬಂದಿ ಈ ಕಾರ್ಯಪಡೆಯಲ್ಲಿ ಇರಲಿದ್ದಾರೆ.

ರಾಮನಗರ ಮತ್ತು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ಕೇಂದ್ರವಾಗಿಟ್ಟುಕೊಂಡು ಈ ಆನೆ ಕಾರ್ಯಪಡೆಗಳು ಕಾರ್ಯ ನಿರ್ವಹಿಸಲಿವೆ. ಆಯಾ ಅರಣ್ಯ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯ ನಿರ್ದೇಶನದಂತೆ ಕೆಲಸ ಮಾಡಬೇಕು. ಗಸ್ತು ತಿರುಗುವುದು, ಆನೆಗಳ ಚಲನವಲನ ಗುರುತಿಸಿ, ಅವುಗಳನ್ನು ಅರಣ್ಯ ಪ್ರದೇಶಕ್ಕೆ ಹಿಮ್ಮೆಟ್ಟಿಸುವುದು, ಸಾರ್ವಜನಿಕರಿಗೆ ತಿಳಿವಳಿಕೆ ನೀಡುವುದು ಈ ಕಾರ್ಯಪಡೆಯ ಪ್ರಮುಖ ಕಾರ್ಯಗಳಾಗಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.