ADVERTISEMENT

ದೀಪಾವಳಿ: KSRTCಯಿಂದ 2000 ವಿಶೇಷ ಬಸ್

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2024, 15:46 IST
Last Updated 26 ಅಕ್ಟೋಬರ್ 2024, 15:46 IST
<div class="paragraphs"><p>ಕೆಎಸ್‌ಆರ್‌ಟಿಸಿ ಬಸ್‌ಗಳು</p></div>

ಕೆಎಸ್‌ಆರ್‌ಟಿಸಿ ಬಸ್‌ಗಳು

   

ಬೆಂಗಳೂರು: ಕರ್ನಾಟಕ ರಾಜ್ಯೋತ್ಸವ, ದೀಪಾವಳಿ ಮತ್ತು ವಾರಾಂತ್ಯದ ದಿನಗಳು ಒಟ್ಟೊಟ್ಟಿಗೆ ಬಂದಿವೆ. ಹೀಗಾಗಿ ಊರಿಗೆ, ಪ್ರವಾಸಕ್ಕೆ ಹೋಗುವವರ ಸಂಖ್ಯೆ  ಹೆಚ್ಚಲಿರುವುದರಿಂದ ಕೆಎಸ್‌ಆರ್‌ಟಿಸಿ 2000 ವಿಶೇಷ ಬಸ್‌ಗಳನ್ನು ರಸ್ತೆಗಿಳಿಸಲು ನಿರ್ಧರಿಸಿದೆ. ಅ.30ರಿಂದ ನ.2ರವರೆಗೆ ನಾಲ್ಕು ದಿನ ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ನ.3 ಮತ್ತು 4ರಂದು ವಿವಿಧೆಡೆಯಿಂದ ಬೆಂಗಳೂರಿಗೆ ವಿಶೇಷ ಸಾರಿಗೆ ಇರಲಿದೆ.

ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣಗಳಿಂದ ಬಸ್‌ಗಳು ಸಂಚರಿಸಲಿವೆ. 

ADVERTISEMENT

ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್,  ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ, ಹೊರರಾಜ್ಯಗಳ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚ್ಚಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ತಿರುಪತಿ, ವಿಜಯವಾಡ ಸಹಿತ ವಿವಿಧೆಡೆ ವಿಶೇಷ ಬಸ್‌ಗಳು ಸಂಚರಿಸಲಿವೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೆಟ್‌ಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ, ಪಿಕ್‍ಅಪ್ ಪಾಯಿಂಟ್‍ ಮಾಹಿತಿಯನ್ನು ಗಮನಿಸುವಂತೆ ಕೋರಲಾಗಿದೆ.

www.ksrtc.karnataka.gov.in ವೆಬ್‌ಸೈಟ್ ಮೂಲಕ ಇ-ಟಿಕೆಟ್ ಬುಕಿಂಗ್‍ ಮಾಡಬಹುದು. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇ 5 ರಿಯಾಯಿತಿ ಸಿಗಲಿದೆ. ಹೋಗುವ ಮತ್ತು ಬರುವ ಪ‍್ರಯಾಣದ ಟಿಕೆಟ್‌ ಒಟ್ಟಿಗೆ ಕಾಯ್ದಿರಿಸಿದರೆ ವಾಪಸ್ಸಾಗುವ ದರದಲ್ಲಿ ಶೇ 10 ರಿಯಾಯಿತಿ ದೊರೆಯಲಿದೆ ಎಂದು ಕೆೆಎಸ್‌ಆರ್‌ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.