ಬೆಂಗಳೂರು: ನಗರದಲ್ಲಿ ದೀಪಾವಳಿ ಹಬ್ಬಕ್ಕೂ ಮುನ್ನವೇ ಪಟಾಕಿ ಅವಘಡಗಳು ಸಂಭವಿಸುತ್ತಿದ್ದು, ಮಿಂಟೊ ಕಣ್ಣಿನ ಆಸ್ಪತ್ರೆಯಲ್ಲಿ ಸೋಮವಾರ ತಡರಾತ್ರಿ ಒಂದು ಪ್ರಕರಣ ವರದಿಯಾಗಿದೆ.
ಕಮ್ಮನಹಳ್ಳಿಯ 18 ವರ್ಷದ ಯುವಕ ಪಟಾಕಿ ಗಾಯದ ಕಾರಣ ಮಿಂಟೊ ಆಸ್ಪತ್ರೆಗೆ ದಾಖಲಾಗಿದ್ದಾನೆ. ಬಿಜಲಿ ಪಟಾಕಿ ಸಿಡಿತ ವೀಕ್ಷಿಸುತ್ತಿದ್ದಾಗ ಕಣ್ಣಿಗೆ ಕಿಡಿ ಸಿಡಿದು, ಗಾಯವಾಗಿದೆ.
‘ಯುವಕನಿಗೆ ಚಿಕಿತ್ಸೆ ಒದಗಿಸಲಾಗುತ್ತಿದ್ದು, ದೃಷ್ಟಿ ಸುಧಾರಿಸುತ್ತಿದೆ. ಪಟಾಕಿಗಳನ್ನು ಸಿಡಿಸುವವರು ಮಾತ್ರವಲ್ಲದೆ, ನೋಡುಗರಿಗೂ ಅಪಾಯವಿರುತ್ತದೆ. ಆದ್ದರಿಂದ ಪಟಾಕಿಯಿಂದ ಅಂತರ ಕಾಯ್ದುಕೊಳ್ಳಬೇಕು’ ಎಂದು ಮಿಂಟೊ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.