ಬೆಂಗಳೂರು: ದ್ವಿಚಕ್ರ ವಾಹನ ಚಾಲನೆ ವೇಳೆ ಪಟಾಕಿಗೆ ಬೆಂಕಿ ಹಚ್ಚಿ, ಇತರರೆಡೆ ಎಸೆಯುತ್ತಾ ಪುಂಡಾಟ ಪ್ರದರ್ಶಿಸುತ್ತಿದ್ದ ಇಬ್ಬರು ವ್ಯಕ್ತಿಗಳಿಗೆ ಹೆಣ್ಣೂರು ಸಂಚಾರಿ ಪೊಲೀಸರು ದಂಡ ವಿಧಿಸಿದ್ದಾರೆ.
ಹೆಣ್ಣೂರು ಬಳಿಯ ಎಚ್.ಬಿ.ಆರ್. ಲೇಔಟ್ ಬಳಿ ಹೆಲ್ಮೆಟ್ ಧರಿಸದೆ ಅಡ್ಡಾದಿಡ್ಡಿಯಾಗಿ ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ ಇಬ್ಬರು, ಪಟಾಕಿ ಹಚ್ಚಿ ರಸ್ತೆಯತ್ತ ಎಸೆಯುತ್ತಿದ್ದರು.
ಕಿಡಿಗೇಡಿಗಳ ಪುಂಡಾಟವನ್ನು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದ ವ್ಯಕ್ತಿಯೊಬ್ಬರು, ‘ಎಕ್ಸ್’ ಮೂಲಕ ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಹೆಣ್ಣೂರು ಸಂಚಾರ ಪೊಲೀಸರು ಇಬ್ಬರನ್ನು ಪತ್ತೆಹಚ್ಚಿ ಹೆಲ್ಮೆಟ್ರಹಿತ ಚಾಲನೆ, ಚಾಲನಾ ಪರವಾನಗಿ ಇಲ್ಲದಿರುವುದು, ಅಪಾಯಕಾರಿ ಚಾಲನೆ, ಸಂಚಾರಕ್ಕೆ ಅಡಚಣೆ ಮಾಡುತ್ತಿರುವುದರ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.