ಬೆಂಗಳೂರು: ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರು ಬಳ್ಳಾರಿ ರಸ್ತೆಯಲ್ಲಿ ಶನಿವಾರ ರೋಡ್ ಶೋ ನಡೆಸಿದ್ದ ಸಂದರ್ಭದಲ್ಲಿ ವಿಪರೀತ ಸಂಚಾರ ದಟ್ಟಣೆ ಉಂಟಾಯಿತು. ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ದಟ್ಟಣೆಯಲ್ಲಿ ಸಿಲುಕಿಕೊಂಡಿತ್ತು.
ದೆಹಲಿಯಿಂದ ವಿಮಾನದಲ್ಲಿ ನಗರಕ್ಕೆ ಆಗಮಿಸಿದ್ದ ಡಿಕೆಶಿ ಅವರನ್ನು ಸ್ವಾಗತಿಸಲು ರಸ್ತೆಯುದ್ದಕ್ಕೂ ಕಾರ್ಯಕರ್ತರು ಸೇರಿದ್ದರು. ಎಸ್ಟಿಮ್ ಮಾಲ್‌ಯಿಂದ ಮೇಖ್ರಿ ವೃತ್ತದವರೆಗೂ ವಾಹನಗಳ ದಟ್ಟಣೆ ಕಂಡುಬಂತು. ವಿಮಾನ ನಿಲ್ದಾಣದಿಂದ ನಗರಕ್ಕೆ ಬರುತ್ತಿದ್ದ ವಾಹನಗಳು ರಸ್ತೆಯುದ್ದಕ್ಕೂ ಸಾಲುಗಟ್ಟಿ ನಿಂತಿದ್ದವು. ಅದೇ ದಟ್ಟಣೆಯಲ್ಲೇ ಆಂಬುಲೆನ್ಸ್ ಸಿಕ್ಕಿಕೊಂಡು, 15 ನಿಮಿಷ ಕಾಯಬೇಕಾಯಿತು. ಆಂಬುಲೆನ್ಸ್ಮುಂದಕ್ಕೆ ಕಳುಹಿಸಲು ಪೊಲೀಸರು ಹರಸಾಹಸಪಟ್ಟರು.
ರಸ್ತೆಯಲ್ಲೇ ರೋಡ್ ಶೋ ಮಾಡಿ ದಟ್ಟಣೆಗೆ ಕಾರಣರಾದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸವಾರರು, ರೋಡ್ ಶೋ ನಡೆಸಲು ಅನುಮತಿ ನೀಡಿದ ಪೊಲೀಸರ ವಿರುದ್ಧವೂ ಅಸಮಾಧಾನ ಹೊರಹಾಕಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.