ಬೆಂಗಳೂರು: ‘ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಉನ್ನತ ಸ್ಥಾನಗಳಿಗೆ ಆಯ್ಕೆಯಾಗುತ್ತೀರಿ. ಅಲ್ಲಿ ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳಬೇಡಿ’ ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸಲಹೆ ನೀಡಿದರು.
ಯುಪಿಎಸ್‌ಸಿ ಪರೀಕ್ಷೆ ಉತ್ತೀರ್ಣರಾದವರಿಗೆ ಐಎಎಸ್ ಬಾಬಾ ಸಂಸ್ಥೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಸಾರ್ವಜನಿಕ ಜೀವನದಲ್ಲಿ ಒಳ್ಳೆಯ ಹೆಸರು ಪಡೆಯಬೇಕು. ಅಧಿಕಾರವನ್ನು ಸಮಾಜದ ಏಳಿಗೆಗೆ ಉಪಯೋಗಿಸಬೇಕು ಎಂದು ಹೇಳಿದರು.
ಐಎಎಸ್ ಬಾಬಾ ಸಂಸ್ಥೆಯ 211 ಅಭ್ಯರ್ಥಿಗಳು ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಅದರಲ್ಲಿ ಕರ್ನಾಟಕದ 30 ಅಭ್ಯರ್ಥಿಗಳಿದ್ದು, ಅವರನ್ನು ಇಂದು ಸನ್ಮಾನಿಸಲಾಯಿತು.
ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ ಎಸ್. ಮೋಹನ್ ಕುಮಾರ್ ಮಾತನಾಡಿ, ‘ಯುಪಿಎಸ್‌ಸಿ ಉತ್ತೀರ್ಣರಾದವರು ಯಾರಿಗೂ ಅಡಿಯಾಳಾಗದೆ ಸಂವಿಧಾನದ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ದೇಶವು ನಿಮ್ಮಿಂದ ಬಹಳಷ್ಟು ನಿರೀಕ್ಷೆ ಮಾಡುತ್ತದೆ. ಸಾರ್ವಜನಿಕ ಸೇವೆಯಲ್ಲಿ ಆಡಳಿತಾತ್ಮಕ ಹುದ್ದೆಗಳು ಆಕರ್ಷಕ ಮತ್ತು ತೃಪ್ತಿಕರ ವೃತ್ತಿಗಳಾಗಿವೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.