ADVERTISEMENT

ಸಮವಸ್ತ್ರದಲ್ಲಿ ರೀಲ್ಸ್ ಮಾಡುವಂತಿಲ್ಲ: ಪೊಲೀಸ್ ಸಿಬ್ಬಂದಿಗೆ ಕಮಿಷನರ್‌ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 23 ಜುಲೈ 2024, 15:44 IST
Last Updated 23 ಜುಲೈ 2024, 15:44 IST
ಬಿ.ದಯಾನಂದ
ಬಿ.ದಯಾನಂದ   

ಬೆಂಗಳೂರು: ಸಮವಸ್ತ್ರದಲ್ಲಿ ರೀಲ್ಸ್‌ ಮಾಡುವ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್‌ ಕಮಿಷನರ್‌ ಬಿ.ದಯಾನಂದ ಎಚ್ಚರಿಕೆ ನೀಡಿದ್ದಾರೆ.

ಪೊಲೀಸ್ ಕರ್ತವ್ಯಗಳಿಗೆ ಸಂಬಂಧಿಸದ ವಿಷಯಗಳ ಕುರಿತು ಸಮವಸ್ತ್ರದಲ್ಲಿ ಇರುವಂತಹ ಫೋಟೊ, ವಿಡಿಯೊ ಹಾಗೂ ರೀಲ್ಸ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡಲಾಗುತ್ತಿದೆ. ಇದು ಇಲಾಖೆಯ ನಿಯಮಗಳಿಗೆ ವಿರುದ್ಧವಾಗಿದೆ. ಸಮವಸ್ತ್ರವು ಬದ್ಧತೆ, ಸಮರ್ಪಣೆ ಮತ್ತು ಹೊಣೆಗಾರಿಕೆಯ ಸಂಕೇತವಾಗಿದೆ. ಹಾಗಾಗಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಕಟ್ಟುನಿಟ್ಟಾಗಿ ನಿಯಮ ಪಾಲಿಸಬೇಕು ಎಂದು ಕಮಿಷನರ್‌ ಸೂಚನೆ ನೀಡಿದ್ದಾರೆ.

ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ದಯಾನಂದ, ‘ಸಮವಸ್ತ್ರದಲ್ಲಿರುವ ಯಾವುದೇ ರೀತಿಯ ವಿಡಿಯೋಗಳು, ರೀಲ್ಸ್ ಅಥವಾ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡದಂತೆ ಖಚಿತಪಡಿಸಿಕೊಳ್ಳಲು ಎಲ್ಲಾ ನಗರ ಘಟಕದ ಮುಖ್ಯಸ್ಥರು, ಡಿಸಿಪಿಗಳು ಮತ್ತು ಎಸಿಪಿಗಳಿಗೆ ಸೂಚನೆ ನೀಡಲಾಗಿದೆ. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.