ADVERTISEMENT

ಅಧಿಕಾರಿಗಳ ನಿಯೋಜನೆಯಲ್ಲಿ ನಿಯಮ ಪಾಲನೆಗೆ ಸುತ್ತೋಲೆ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2023, 16:35 IST
Last Updated 12 ಸೆಪ್ಟೆಂಬರ್ 2023, 16:35 IST
ವಿಧಾನ ಸೌಧ
ವಿಧಾನ ಸೌಧ   

ಬೆಂಗಳೂರು: ಯಾವುದೇ ಇಲಾಖೆಯ ಅಧಿಕಾರಿಗಳು ಮತ್ತು ನೌಕರರನ್ನು ವೃಂದ ಮತ್ತು ನೇಮಕಾತಿ ನಿಯಮಗಳಿಗೆ ವಿರುದ್ಧವಾಗಿ ಅನ್ಯ ಇಲಾಖೆಗಳಿಗೆ ನಿಯೋಜನೆ ಮಾಡದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮಂಗಳವಾರ ಸುತ್ತೋಲೆ ಹೊರಡಿಸಿದೆ.

ಒಬ್ಬ ನೌಕರನನ್ನು ಯಾವುದೇ ಹುದ್ದೆಗೆ ಗರಿಷ್ಠ ಐದು ವರ್ಷಗಳವರೆಗೆ ನಿಯೋಜನೆ ಮಾಡಬಹುದು. ಬಳಿಕ ಆ ನೌಕರ ಎರಡು ವರ್ಷಗಳವರೆಗೆ ಮಾತೃ ಇಲಾಖೆಯಲ್ಲಿ ಕಾರ್ಯನಿರ್ವಹಿಸುವುದು ಕಡ್ಡಾಯ. ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಅನ್ಯ ಇಲಾಖೆಗಳಿಂದ ನಿಯೋಜನೆಗೆ ಅವಕಾಶ ಕಲ್ಪಿಸದ ಹುದ್ದೆಗಳಿಗೆ ನಿಯೋಜನೆ ಮಾಡುವುದನ್ನು ನಿರ್ಬಂಧಿಸಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಅಥವಾ ಸರ್ಕಾರದ ವಿಶೇಷ ಆದೇಶಗಳ ಮೂಲಕ ಐದು ವರ್ಷ ಪೂರ್ಣಗೊಂಡ ಬಳಿಕವೂ ನಿಯೋಜನೆ ಮೇಲೆ ಮುಂದುವರಿದಿರುವವರನ್ನು ಕೂಡಲೆ ಮಾತೃ ಇಲಾಖೆಗೆ ಹಿಂದಿರುಗಿಸಬೇಕು. ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಅವಕಾಶವಿದ್ದರೆ ಮಾತ್ರ ಸಮಾನ ದರ್ಜೆ ಅಥವಾ ಹುದ್ದೆಗಳಿಗೆ ನಿಯೋಜನೆ ಮಾಡಬಹುದು ಎಂದು ತಿಳಿಸಿದೆ.

ADVERTISEMENT

ಯಾವುದೇ ಇಲಾಖೆಯ ಕೆಳ ದರ್ಜೆಯ ಅಧಿಕಾರಿಯನ್ನು ವೇತನ ಶ್ರೇಣಿಯ ಆಧಾರದಲ್ಲಿ ಮೇಲ್ದರ್ಜೆಯ ಹುದ್ದೆಗೆ ನಿಯೋಜಿಸುವುದನ್ನೂ ನಿರ್ಬಂಧಿಸಲಾಗಿದೆ ಎಂದು ಇಲಾಖೆ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.