ಬೆಂಗಳೂರು: ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿ ಆಯುಧ ಪೂಜೆಯಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಬುಧವಾರ ಸುತ್ತೋಲೆ ಹೊರಡಿಸಿದೆ.
ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳು ಪಾರಂಪರಿಕ ಕಟ್ಟಡಗಳಾಗಿವೆ. ಈ ಕಟ್ಟಡಗಳಲ್ಲಿ ಆಯುಧ ಪೂಜೆ ಮಾಡುವಾಗ ಕುಂಬಳಕಾಯಿ ಮತ್ತು ರಂಗೋಲಿಗಳಲ್ಲಿ ರಾಸಾಯನಿಕ ಮಿಶ್ರಿತವಾದ ಬಣ್ಣ, ಅರಿಶಿನ, ಕುಂಕುಮ ಮತ್ತು ಸುಣ್ಣವನ್ನು ಬಳಸಬಾರದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಪಾರಂಪರಿಕ ಕಟ್ಟಡಗಳ ಸೌಂದರ್ಯ ರಕ್ಷಿಸುವುದು ಅಧಿಕಾರಿಗಳು ಮತ್ತು ನೌಕರರ ಕರ್ತವ್ಯ. ಈ ವಿಚಾರದಲ್ಲಿ ಸ್ಪಂದಿಸದೇ ಇದ್ದರೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಮತ್ತು ನೌಕರರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದೂ ಎಚ್ಚರಿಕೆ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.