ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ, ವಕೀಲ ಡಾ.ಸಿ.ಎಸ್. ದ್ವಾರಕಾನಾಥ್ ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನಾಚರಣೆ ಸಮಾರಂಭದಲ್ಲಿ ದ್ವಾರಕಾನಾಥ್ ಕಾಂಗ್ರೆಸ್ ಸದಸ್ಯತ್ವ ಸ್ವೀಕರಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಬಾವುಟ ನೀಡುವ ಮೂಲಕ ದ್ವಾರಕಾನಾಥ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಕೇಂದ್ರದ ಮಾಜಿ ಸಚಿವರಾದ ಕೆ.ಎಚ್. ಮುನಿಯಪ್ಪ, ಕೆ. ರೆಹಮಾನ್ ಖಾನ್, ರಾಜ್ಯಸಭಾ ಸದಸ್ಯ ಡಾ.ಎಲ್. ಹನುಮಂತಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮ್ಮದ್, ರಾಮಲಿಂಗಾ ರೆಡ್ಡಿ, ಶಾಸಕ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ನಾರಾಯಣ ಸ್ವಾಮಿ, ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಪುಷ್ಪಾ ಅಮರನಾಥ್, ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಎಂ.ಡಿ. ಲಕ್ಷ್ಮೀನಾರಾಯಣ ಇದ್ದರು.
ರಾಜೀವ್ ಗಾಂಧಿ ಮತ್ತು ದೇವರಾಜ ಅರಸು ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಅರ್ಪಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.