ನೆಲಮಂಗಲ: ‘ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಒಟ್ಟಾಗಿ ನನ್ನ ಗೆಲುವಿಗೆ ಶ್ರಮಿಸುತ್ತಿದ್ದಾರೆ. ತಾಲ್ಲೂಕಿನಾದ್ಯಂತ ಕಾರ್ಯಕರ್ತರು ಅಭೂತಪೂರ್ವ ಬೆಂಬಲ ನೀಡುತ್ತಿರುವುದು ನನ್ನ ಗೆಲುವನ್ನು ಖಚಿತಪಡಿಸಿದೆ’ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ. ಕೆ.ಸುಧಾಕರ್ ತಿಳಿಸಿದರು.
ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ– ಜೆಡಿಎಸ್ ಸಮನ್ವಯ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
‘ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಮಿಕರಿಗಾಗಿ ಸುಸಜ್ಜಿತ ಇಎಸ್‌ಐ ಆಸ್ಪತ್ರೆ ಮಂಜೂರು ಮಾಡಿಸುತ್ತೇನೆ. ತ್ಯಾಮಗೊಂಡ್ಲು ಕೆರೆಗೆ ನೀರು ತುಂಬಿಸಿ ಪುನಶ್ಚೇತನಗೊಳಿಸುತ್ತೇನೆ. ಇಂತಹ ಹಲವು ಯೋಜನೆಗಳ ಮೂಲಕ ಜನರ ಬದುಕನ್ನು ಅಭಿವೃದ್ಧಿಪಡಿಸುವ ಶಾಶ್ವತ ಗ್ಯಾರಂಟಿಗಳನ್ನು ಮೋದಿ ಸರ್ಕಾರ ನೀಡುತ್ತಿದೆ‘ ಎಂದರು.
ಮಾಜಿ ಶಾಸಕರಾದ ಎಂ.ವಿ.ನಾಗರಾಜು, ಡಾ.ಕೆ.ಶ್ರೀನಿವಾಸಮೂರ್ತಿ, ಇ.ಕೃಷ್ಣಪ್ಪ, ಮುಖಂಡ ಸಪ್ತಗಿರಿ ಶಂಕರ್‌ನಾಯಕ್, ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ, ತಾಲ್ಲೂಕು ಅಧ್ಯಕ್ಷ ಜಗದೀಶ್ ಚೌಧರಿ, ಯಂಟಗಾನಹಳ್ಳಿ ಗ್ರಾ.ಪಂ.ಅಧ್ಯಕ್ಷ ರಾಹುಲ್‌ಗೌಡ, ಮುಖಂಡ ಎಸ್.ಮಲ್ಲಯ್ಯ, ಜೆಡಿಎಸ್ ಅಧ್ಯಕ್ಷ ಟಿ.ತಿಮ್ಮರಾಯಪ್ಪ, ಮುಖಂಡರಾದ ಭವಾನಿಶಂಕರ್ ಭೈರೇಗೌಡ, ಎಲ್.ಜಿ.ಕೃಷ್ಣಪ್ಪ ಕಾರ್ಯಕ್ರಮದಲ್ಲಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.