ADVERTISEMENT

ಬೆಂಗಳೂರು | ಮದ್ಯ ಸೇವಿಸಿ ವಾಹನ ಚಾಲನೆ: 394 ಮಂದಿ ವಿರುದ್ಧ ಎಫ್‌ಐಆರ್‌

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2024, 14:44 IST
Last Updated 4 ನವೆಂಬರ್ 2024, 14:44 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಅತಿ ವೇಗವಾಗಿ ಹಾಗೂ ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿರುವ ವಾಹನ ಸವಾರರ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಸಂಚಾರ ವಿಭಾಗದ ಪೊಲೀಸರು 394 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

ಅ.28ರಿಂದ ನ.3ರ ತನಕ ನಗರದ 50 ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಯಿತು. ಕಾರ್ಯಾಚರಣೆ ವೇಳೆ ಮದ್ಯ ಸೇವಿಸಿ ವಾಹನ ಚಾಲನೆ ಹಾಗೂ ಅತಿವೇಗವಾಗಿ ವಾಹನ ಚಾಲನೆ ಮಾಡುತ್ತಿರುವುದು ಪತ್ತೆಯಾಗಿದೆ. ವಿವಿಧ ಮಾದರಿಯ ಒಟ್ಟು 18,502 ವಾಹನಗಳನ್ನು ಪರಿಶೀಲನೆ ನಡೆಸಿ ಸಂಚಾರ ನಿಯಮ ಉಲ್ಲಂಘಿಸಿದ್ದ 394 ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಯಿತು ಎಂದು ಸಂಚಾರ ಪೊಲೀಸರು ಹೇಳಿದರು.

ADVERTISEMENT

ಅತಿವೇಗವಾಗಿ ವಾಹನ ಚಲಾಯಿಸುವವರ ವಿರುದ್ಧ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ 128 ಪ್ರಕರಣ ದಾಖಲು ಮಾಡಿಕೊಳ್ಳಲಾಯಿತು. ₹1.29 ಲಕ್ಷ ದಂಡ ಸಂಗ್ರಹಿಸಲಾಯಿತು.

‘ರಸ್ತೆ ಸುರಕ್ಷತೆಗಾಗಿ ಇಂತಹ ಕಾರ್ಯಾಚರಣೆ ಮುಂದುವರಿಸಲಾಗುವುದು’ ಎಂದು ಸಂಚಾರ ವಿಭಾಗದ ಜಂಟಿ ಕಮಿಷನರ್‌ ಎಂ.ಎನ್‌.ಅನುಚೇತ್‌ ತಿಳಿಸಿದರು.

ಸಂಚಾರ ನಿಯಮ ಉಲ್ಲಂಘಿಸಿದವರ ವಿರುದ್ಧ ಸಂಚಾರ ಪೂರ್ವ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿ, 1,196 ಮಂದಿ ಎಫ್‌ಐಆರ್ ದಾಖಲಿಸಿದ್ದಾರೆ.

ನಿರ್ಬಂಧಿತ ರಸ್ತೆಯಲ್ಲಿ ವಾಹನ ಸಂಚಾರ, ಪಾದಚಾರಿ ಮಾರ್ಗದಲ್ಲಿ ವಾಹನ ನಿಲುಗಡೆ ಮಾಡುತ್ತಿದ್ದವರ ವಿರುದ್ಧ ₹5.98 ಲಕ್ಷ ದಂಡ ಸಂಗ್ರಹಿಸಲಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.