ADVERTISEMENT

ಬಿಎಂಟಿಸಿಯಲ್ಲಿ ಚಾಲನಾ ತರಬೇತಿ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2024, 23:27 IST
Last Updated 25 ಅಕ್ಟೋಬರ್ 2024, 23:27 IST
<div class="paragraphs"><p>ಬಸ್</p></div>

ಬಸ್

   

– ಪ್ರಜಾವಾಣಿ ಚಿತ್ರ

ಬೆಂಗಳೂರು: ರಾಜ್ಯ ಸರ್ಕಾರದ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಎಸ್‌ಪಿ) ಹಾಗೂ ಗಿರಿಜನ ಉಪ ಯೋಜನೆ (ಟಿಎಸ್‌ಪಿ) ಅಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಉಚಿತವಾಗಿ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿ ಕಾರ್ಯಕ್ರಮವನ್ನು ಬಿಎಂಟಿಸಿ ಹಮ್ಮಿಕೊಂಡಿದೆ. 

ADVERTISEMENT

ಕಾರು, ಜೀಪು ತರಬೇತಿಗೆ 18ರಿಂದ 45 ವಯೋಮಿತಿಯ ಅಭ್ಯರ್ಥಿಗಳು, ಬಸ್‌ ಚಾಲನಾ ತರಬೇತಿಗೆ 20ರಿಂದ 45 ವಯೋಮಿತಿಯವರು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. 

ವಸತಿ ಸಹಿತ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ವಸತಿ ಸೌಕರ್ಯ ಮತ್ತು ಊಟೋಪಚಾರದ ವ್ಯವಸ್ಥೆಯನ್ನು ನೀಡಲಾಗುತ್ತದೆ. ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಸೇವಾ ಸಿಂಧು ಪೋರ್ಟಲ್ https://sevasindhuservices.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ವಿವರಗಳಿಗೆ ಸೇವಾಸಿಂಧು ಪೋರ್ಟಲ್‌ ಸಹಾಯ ಕೇಂದ್ರದ ಸಂಪರ್ಕ ಸಂಖ್ಯೆ: 08022279954, 8792662814 / 8792662816  ಸಂಪರ್ಕಿಸಬಹುದು.

ತರಬೇತಿ ಕುರಿತ ಮಾಹಿತಿಗಾಗಿ ಸಂಸ್ಥೆಯ ವೆಬ್‌ಸೈಟ್: www.mybmtc.gov.in ಅಥವಾ ದೂರವಾಣಿ ಸಂಖ್ಯೆ: 6364858520 / 7760991085ಗೆ ಕರೆ ಮಾಡಿ ಪಡೆಯಬಹುದು ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.