ADVERTISEMENT

ಬೆಂಗಳೂರು | ಮಾದಕ ವಸ್ತು ಮಾರಾಟ: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2024, 19:40 IST
Last Updated 16 ಅಕ್ಟೋಬರ್ 2024, 19:40 IST
<div class="paragraphs"><p>ಬಂಧನ </p></div>

ಬಂಧನ

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕಾರು ಚಾಲಕನನ್ನು ಸಂಪಂಗಿರಾಮನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಸರ್ಜಾಪುರ ನಿವಾಸಿ ಮಹೇಶ್ (30)ಬಂಧಿತ. ಈತನಿಂದ ₹32 ಸಾವಿರ ಮೌಲ್ಯದ 8 ಗ್ರಾಂ. ಎಂಡಿಎಂಎ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದರು.

‘ಆರೋಪಿ ವಿದೇಶಿ ಪ್ರಜೆಯಿಂದ ಕಡಿಮೆ ಮೊತ್ತಕ್ಕೆ ಎಂಡಿಎಂಎ ಖರೀದಿಸಿ, ಮಾರುತ್ತಿದ್ದ. ಇದೇ ಮೊದಲ ಬಾರಿಗೆ ಈತ ಮಾದಕ ವಸ್ತು ಮಾರಾಟ ದಂಧೆಯಲ್ಲಿ ತೊಡಗಿದ್ದ ಎಂಬುದು ತನಿಖೆಯಿಂದ ಗೊತ್ತಾಗಿದೆ‘ ಎಂದು ಪೊಲೀಸರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.