ಬೆಂಗಳೂರು: ಅಂತರರಾಷ್ಟ್ರೀಯ ಡ್ರಗ್ಸ್ ಜಾಲ ಪ್ರಕರಣ ಸಂಬಂಧ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಸೇರಿದಂತೆ 25 ಮಂದಿ ವಿರುದ್ಧ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದ್ದಾರೆ.
ಪಾರ್ಟಿಗಳನ್ನು ಆಯೋಜಿಸಿ ಡ್ರಗ್ಸ್ ಮಾರಾಟ ಹಾಗೂ ಸೇವನೆ ಮಾಡುತ್ತಿದ್ದ ಪ್ರಕರಣವನ್ನು ಭೇದಿಸಿದ್ದ ಸಿಸಿಬಿ ಪೊಲೀಸರು, ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಕೆಲವರು ಈಗಾಗಲೇ ಜಾಮೀನು ಮೇಲೆ ಹೊರಗೆ ಬಂದಿದ್ದಾರೆ.
ಇದೀಗ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಪೊಲೀಸರು, 2,900 ಪುಟಗಳ ದೋಷಾರೋಪ ಪಟ್ಟಿಯನ್ನು ಸಿದ್ಧಪಡಿಸಿ ನ್ಯಾಯಾಲಯಕ್ಕೆ ನೀಡಿದ್ದಾರೆ.
’ಪ್ರಕರಣದಲ್ಲಿ ಮೂವರು ತಲೆಮರೆಸಿಕೊಂಡಿದ್ದಾರೆ. ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ, ವಿರೇನ್ ಖನ್ನಾ ಸೇರಿದಂತೆ 25 ಆರೋಪಿಗಳನ್ನು ಬಂಧಿಸಲಾಗಿದ್ದು, ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. 180 ಸಾಕ್ಷಿಗಳ ಹೇಳಿಕೆ ಉಲ್ಲೇಖಿಸಲಾಗಿದೆ’ ಎಂದೂ ಸಿಸಿಬಿ ಮೂಲಗಳು ಹೇಳಿವೆ.
ಇದನ್ನೂ ಓದಿ:ಡ್ರಗ್ಸ್ ಪ್ರಕರಣ: ಜೈಲಿನಿಂದ ಹೊರಬಂದ ನಟಿ ರಾಗಿಣಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.