ಬೆಂಗಳೂರು: ಮಾದಕ ವಸ್ತು ಮಾರಾಟ ಜಾಲದಲ್ಲಿ ಸಕ್ರಿಯರಾಗಿದ್ದ ಇಬ್ಬರನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ.
‘ಜೋವಿನ್ ಜಾನ್ಸನ್ ಹಾಗೂ ಪ್ರಣವ್ ಬಂಧಿತರು. ಇವರು ಮಾರತ್ತಹಳ್ಳಿ ಠಾಣೆಯ ವ್ಯಾಪ್ತಿಯಲ್ಲಿ ವಾಸವಿದ್ದರು. ಆರೋಪಿಗಳಿಂದ 200 ಗ್ರಾಂ ಎಂಡಿಎಂಎ ಹರಳು, ಎರಡು ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ ತೂಕದ ಯಂತ್ರ ಜಪ್ತಿ ಮಾಡಲಾಗಿದೆ. ಇವುಗಳ ಒಟ್ಟು ಮೌಲ್ಯ ₹20 ಲಕ್ಷ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘ಆರೋಪಿಗಳು ಕೇರಳದಿಂದ ಕಡಿಮೆ ಬೆಲೆಗೆ ಎಂಡಿಎಂಎ ಹರಳು ಖರೀದಿಸಿ ನಗರಕ್ಕೆ ತರುತ್ತಿದ್ದರು. 1 ಗ್ರಾಂ ಹರಳನ್ನು ₹8 ಸಾವಿರ ಹಾಗೂ₹10 ಸಾವಿರಕ್ಕೆ ಕಾಲೇಜು ವಿದ್ಯಾರ್ಥಿಗಳು ಹಾಗೂ ಪರಿಚಯಸ್ಥರಿಗೆ ಮಾರುತ್ತಿದ್ದರು. ಇವರ ವಿರುದ್ಧ ಮಾರತ್ತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.