ADVERTISEMENT

ಬೆಂಗಳೂರು | ₹2.36 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ: ನೈಜೀರಿಯಾ ಮೂಲದ ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2024, 14:34 IST
Last Updated 29 ಅಕ್ಟೋಬರ್ 2024, 14:34 IST
ಇನಿಯಾಂಗ್‌ ಉನ್ಯಮಿ ಬೋನಿಫೇಸ್‌
ಇನಿಯಾಂಗ್‌ ಉನ್ಯಮಿ ಬೋನಿಫೇಸ್‌   

ಬೆಂಗಳೂರು: ನಿಷೇಧಿತ ಮಾದಕ ವಸ್ತು ಎಂಡಿಎಂಎ ಕ್ರಿಸ್ಟಲ್‌ ಮಾರಾಟ ಮಾಡುತ್ತಿದ್ದ ನೈಜೀರಿಯಾದ ಇನಿಯಾಂಗ್‌ ಉನ್ಯಮಿ ಬೋನಿಫೇಸ್‌(31) ಎಂಬಾತನನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಸಿಬ್ಬಂದಿ ಮಂಗಳವಾರ ಬಂಧಿಸಿದ್ದಾರೆ.

ಆರೋಪಿಯಿಂದ 1 ಕೆ.ಜಿ 577 ಗ್ರಾಂ. ಎಂಡಿಎಂಎ ಕ್ರಿಸ್ಟಲ್‌, ಮೊಬೈಲ್‌, ಎಲೆಕ್ಟ್ರಾನಿಕ್‌ ತೂಕದ ಯಂತ್ರ ಜಪ್ತಿ ಮಾಡಲಾಗಿದೆ. ಇವುಗಳ ಮೌಲ್ಯ ₹2.36 ಕೋಟಿ ಎಂದು ಅಂದಾಜಿಸಲಾಗಿದೆ.

‘ಪರಪ್ಪನ ಅಗ್ರಹಾರ ಪೊಲೀಸ್‌ ಠಾಣಾ ವ್ಯಾಪ್ತಿಯ ಶ್ರೀನಿಧಿ ಲೇಔಟ್‌ನ ದೊಡ್ಡನಾಗಮಂಗಲದ ಮನೆಯೊಂದರಲ್ಲಿ ವಿದೇಶಿ ವ್ಯಕ್ತಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದಿತ್ತು. ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಯಿತು’ ಎಂದು ಸಿಸಿಬಿ ಪೊಲೀಸರು ಹೇಳಿದರು.

ADVERTISEMENT

‘2020ರಲ್ಲಿ ವೈದ್ಯಕೀಯ ವೀಸಾ ಪಡೆದು ಭಾರತಕ್ಕೆ ಬಂದು ನೋಯ್ಡಾದಲ್ಲಿ ನೆಲಸಿದ್ದ. ಅದೇ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನೆಲಸಿದ್ದ ವಿದೇಶಿ ಮೂಲದ ಮಹಿಳಾ ಡ್ರಗ್ಸ್ ಪೆಡ್ಲರ್‌ ಪರಿಚಯ ಆಗಿತ್ತು. ಅಲ್ಲಿಂದ ಬೆಂಗಳೂರಿಗೆ ಬಂದಿದ್ದ ಆರೋಪಿ, ಆಕೆಯ ಜತೆಗೆ ಸೇರಿಕೊಂಡು ಡ್ರಗ್ಸ್ ಮಾರಾಟ ದಂಧೆ ನಡೆಸುತ್ತಿದ್ದ. ವಿದೇಶಿ ಮಹಿಳೆ ತಲೆಮರೆಸಿಕೊಂಡಿದ್ದು, ಹುಡುಕಾಟ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.