ಬೆಂಗಳೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿಯು (ಅಂಬೇಡ್ಕರ್ ವಾದ) ಅಕ್ಟೋಬರ್ 5 ಮತ್ತು 6ರಂದು ತುಮಕೂರಿನಲ್ಲಿ ರಾಜ್ಯ ಸರ್ವ ಸದಸ್ಯರ ಮಹಾ ಅಧಿವೇಶನವನ್ನು ಹಮ್ಮಿಕೊಂಡಿದೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ‘ಅ. 5ರಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಈ ಅಧಿವೇಶನವನ್ನು ಉದ್ಘಾಟಿಸಲಿದ್ದಾರೆ. ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪ್ರೊ.ಬಿ. ಕೃಷ್ಣಪ್ಪ ಟ್ರಸ್ಟ್‌ನ ಅಧ್ಯಕ್ಷೆ ಇಂದಿರಾ ಕೃಷ್ಣಪ್ಪ, ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಪ್ರಧಾನ ಸಂಚಾಲಕ ಕೆ.ಎಂ. ರಾಮಚಂದ್ರಪ್ಪ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2ಕ್ಕೆ ‘ಬುದ್ಧ ಭಾರತ v/s ಬ್ರಾಹ್ಮಣತ್ವ’, ‘ದಲಿತ ಚಳವಳಿಯ ಚಾರಿತ್ರಿಕ ಮಹತ್ವ ಮತ್ತು ವರ್ತಮಾನದ ಸವಾಲುಗಳು’ ಎಂಬ ಗೋಷ್ಠಿಗಳು ನಡೆಯಲಿವೆ’ ಎಂದು ಮಾಹಿತಿ ನೀಡಿದರು.
‘ಅ. 6ರಂದು ‘ಒಳಮೀಸಲಾತಿ, ಸುಪ್ರೀಂ ಕೋರ್ಟಿನ ತೀರ್ಪು ಮತ್ತು ಸಾಮಾಜಿಕ ನ್ಯಾಯ’ ಎಂಬ ಗೋಷ್ಠಿ ನಡೆಯಲಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ರವಿಕುಮಾರ್ ನೀಹ, ರಮೇಶ್ ಡಾಕುಳಕಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಪಾಲ್ಗೊಳ್ಳಲಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.