ADVERTISEMENT

ಇ ಕಾಮರ್ಸ್‌: 2,670 ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2024, 17:37 IST
Last Updated 10 ನವೆಂಬರ್ 2024, 17:37 IST
   

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ನಗರ ಸಂಚಾರ ವಿಭಾಗದ ಪೊಲೀಸರು ಇ ಕಾಮರ್ಸ್ ಉತ್ಪನ್ನ ತಲುಪಿಸುವ ದ್ವಿಚಕ್ರ ವಾಹನ ಚಾಲಕರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ 2,670 ಪ್ರಕರಣಗಳನ್ನು ದಾಖಲಿಸಿಕೊಂಡು ₹ 13,78,500 ದಂಡ ಕಟ್ಟಿಸಿಕೊಂಡಿದ್ದಾರೆ.

ನಗರದಾದ್ಯಂತ ಶನಿವಾರ ಸಂಚಾರ ವಿಭಾಗದ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ ಹೆಲ್ಮೆಟ್ ಇಲ್ಲದೆ ವಾಹನ ಚಾಲನೆ, ಮೊಬೈಲ್ ಫೋನ್ ಬಳಕೆ, ಟ್ರಾಫಿಕ್ ಸಿಗ್ನಲ್ ಜಂಪ್ ಮಾಡಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

602 ಪ್ರಕರಣ:

ADVERTISEMENT

ಆ್ಯಪ್ ಆಧರಿತ ಆಹಾರ ಪೂರೈಕೆ ಮಾಡುವ ಕಂಪನಿಗಳ ಪ್ರತಿನಿಧಿಗಳಿಂದ ಸಂಚಾರ ನಿಯಮ ಉಲ್ಲಂಘನೆಯಾಗುತ್ತಿರುವುದರ ಕುರಿತು ಕಾರ್ಯಾಚರಣೆ ಕೈಗೊಂಡ ನಗರ ಪೊಲೀಸರು 692 ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.