ADVERTISEMENT

ಬೆಂಗಳೂರು: ಸಂಭ್ರಮದಿಂದ ಈದ್‌ ಉಲ್‌ ಫಿತ್ರ್‌ ಆಚರಣೆ

ಈದ್ಗಾ ಮೈದಾನ, ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2024, 0:30 IST
Last Updated 12 ಏಪ್ರಿಲ್ 2024, 0:30 IST
<div class="paragraphs"><p>ನಗರದ ನಂದಿದುರ್ಗ ರಸ್ತೆಯಲ್ಲಿರುವ ಖುದ್ಧೂಸ್ ಸಾಹೇಬ್ ಈದ್ಗಾ ಮೈದಾನದಲ್ಲಿ ಮಕ್ಕಳು ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು </p></div>

ನಗರದ ನಂದಿದುರ್ಗ ರಸ್ತೆಯಲ್ಲಿರುವ ಖುದ್ಧೂಸ್ ಸಾಹೇಬ್ ಈದ್ಗಾ ಮೈದಾನದಲ್ಲಿ ಮಕ್ಕಳು ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು

   

–ಪ್ರಜಾವಾಣಿ ಚಿತ್ರ: ಎಂ.ಎಸ್‌.ಮಂಜುನಾಥ್‌

ಬೆಂಗಳೂರು: ರಂಜಾನ್ ಉಪವಾಸ ಮುಗಿಸಿದ ಬಳಿಕ ಈದ್‌ ಉಲ್‌ ಫಿತ್ರ್‌ ಹಬ್ಬವನ್ನು ಮುಸ್ಲಿಮರು ಗುರುವಾರ ಸಂಭ್ರಮದಿಂದ ಆಚರಿಸಿದರು.

ADVERTISEMENT

ಒಂದು ತಿಂಗಳು ಉಪವಾಸ ಮಾಡಿದ್ದ ಅವರು ತಮ್ಮ ಗಳಿಕೆಯಲ್ಲಿ ಬಡವರಿಗೆ ದಾನ ಮಾಡುವ ಸಂಪ್ರದಾಯವನ್ನು ಪಾಲಿಸಿದರು. ಜಕಾತ್‌, ಫಿತ್ರ್‌ ದಾನ ಮಾಡಿದರು. ದವಸ–ಧಾನ್ಯ, ನಗದು ನೀಡಿದರು. 

ಹೊಸ ಬಟ್ಟೆ ಧರಿಸಿ ಸಮೀಪದ ಈದ್ಗಾ ಮೈದಾನಗಳು, ಮಸೀದಿಗಳಿಗೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ನಂತರ ಸಿಹಿ ಹಂಚಿ, ಪರಸ್ಪರ ಆಲಿಂಗಿಸಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡರು. ಲೋಕಕಲ್ಯಾಣಕ್ಕೆ ಅಲ್ಲಾಹುವಿನಲ್ಲಿ ಪ್ರಾರ್ಥನೆ ಸಲ್ಲಿಸಿದ ಧರ್ಮ ಗುರುಗಳು, ಹಬ್ಬದ ಸಂದೇಶ ನೀಡಿದರು.

ನಗರದ ಮೈಸೂರು ರಸ್ತೆಯ ಈದ್ಗಾ ಮೈದಾನದಲ್ಲಿ ಈದ್‌–ಉಲ್‌ ಫಿತ್ರ್‌ ಅಂಗವಾಗಿ ಬೆಳಿಗ್ಗೆ ಸಾವಿರಾರು ಮುಸ್ಲಿಮರು ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. 

ಒಂದು ಗಂಟೆಗೂ ಹೆಚ್ಚು ಕಾಲ ಸಾಮೂಹಿಕ ಪ್ರಾರ್ಥನೆ ನಡೆಯಿತು. ನಂತರ ಕುರಾನ್‌ ಪಠಣ ನಡೆಯಿತು. ನೂರಾರು ಸಂಖ್ಯೆಯಲ್ಲಿ ಮಕ್ಕಳು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು. 

ಪ್ರಾರ್ಥನೆಯ ಸಂದರ್ಭ ವಿವಿಧೆಡೆ ವಾಹನಗಳ ಸಂಚಾರ ಮಾರ್ಗವನ್ನು ಬದಲಿಸಲಾಗಿತ್ತು. ನಗರದ ಮಸೀದಿ, ದರ್ಗಾ ಹಾಗೂ ಮದರಸಾಗಳಿಗೆ ವಿಶೇಷ ವಿದ್ಯುತ್ ಹಾಗೂ ಬಣ್ಣದ ಕಾಗದಗಳ ಅಲಂಕಾರ ಮಾಡಲಾಗಿತ್ತು. ವಿದ್ಯುತ್‌ ಬೆಳಕಿನಲ್ಲಿ ಮಸೀದಿಗಳು ಕಂಗೊಳಿಸಿದವು.

ಪ್ರತಿ ಮುಸಲ್ಮಾನರ ಮನೆಯಲ್ಲಿಯೂ ಹಬ್ಬದ ಸಂಭ್ರಮವು ಮನೆ ಮಾಡಿತ್ತು. ಎಲ್ಲರೂ ಹೊಸ ಬಟ್ಟೆ ತೊಟ್ಟು ಸಂಭ್ರಮಿಸಿದರು. ಸಂಬಂಧಿಕರು ಹಾಗೂ ಸ್ನೇಹಿತರನ್ನು ಮನೆಗೆ ಆಹ್ವಾನಿಸಿ, ಹಬ್ಬದ ಶುಭಾಶಯ ಕೋರಿದರು.

ನಗರದ ನಂದಿದುರ್ಗ ರಸ್ತೆಯಲ್ಲಿರುವ ಖುದ್ಧೂಸ್ ಸಾಹೇಬ್ ಈದ್ಗಾ ಮೈದಾನದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಡಿದ್ದರು –ಪ್ರಜಾವಾಣಿ ಚಿತ್ರ: ಎಂ.ಎಸ್‌.ಮಂಜುನಾಥ್‌
ಅರೆಬಿಕ್ ಉಡುಪು ಧರಿಸಿದ್ದ ಬಾಲಕನೊಬ್ಬ ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ನಡೆದ ಈದ್ ಉಲ್-ಫಿತರ್ ಪ್ರಾರ್ಥನೆಯಲ್ಲಿ ಗಮನ ಸೆಳೆದನು. ಪ್ರಜಾವಾಣಿ ಚಿತ್ರ/ ಕಿಶೋರ್ ಕುಮಾರ್ ಬೋಳಾರ್
ಬಿರು ಬಿಸಿಲಿನ ನಡುವೆ ಚಾಮರಾಜಪೇಟೆ ಮೈದಾನದಲ್ಲಿ ಗುರುವಾರ ಈದ್‌ ಉಲ್‌ ಫಿತ್ರ್‌ ಅಂಗವಾಗಿ ಆಯೋಜಿಸಿದ್ದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದ ಮುಸ್ಲಿಂ ಸಮುದಾಯದವರು. 
ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಈದ್ ಉಲ್-ಫಿತ್ರ್‌ ಹಬ್ಬದ ಅಂಗವಾಗಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಮಾಡಿದರು. ಪ್ರಜಾವಾಣಿ ಚಿತ್ರ ಕಿಶೋರ್ ಕುಮಾರ್ ಬೋಳಾರ್
ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ಪುತ್ರ ಜೈದ್ ಖಾನ್ ಅವರೊಂದಿಗೆ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಪ್ರಾರ್ಥನೆಯಲ್ಲಿ ಪಾಲ್ಗೊಂಡರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.