ADVERTISEMENT

ಎಲೆಕ್ಟ್ರಿಕ್‌ ವೆಹಿಕಲ್‌: ಬಿಎಂಟಿಸಿಗೆ ಎರಡು ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2024, 10:20 IST
Last Updated 24 ಅಕ್ಟೋಬರ್ 2024, 10:20 IST
ಬಿಎಂಟಿಸಿಗೆ ಇವಿ ಬಸ್‌ ಚಾಂಪಿಯನ್ ಪ್ರಶಸ್ತಿ ಹಾಗೂ ಗ್ರೀನ್ ಫ್ಲೀಟ್ ಎಕ್ಸಲೆನ್ಸ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು
ಬಿಎಂಟಿಸಿಗೆ ಇವಿ ಬಸ್‌ ಚಾಂಪಿಯನ್ ಪ್ರಶಸ್ತಿ ಹಾಗೂ ಗ್ರೀನ್ ಫ್ಲೀಟ್ ಎಕ್ಸಲೆನ್ಸ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು   

ಬೆಂಗಳೂರು: ಎಲೆಕ್ಟ್ರಿಕ್‌ ವಾಹನಗಳನ್ನು ಮತ್ತು ಚಾರ್ಜಿಂಗ್‌ ಪಾಯಿಂಟ್‌ ಪರಿಚಯಿಸಿದ ಕಾರಣಕ್ಕೆ ಇವಿ ಬಸ್‌ ಚಾಂಪಿಯನ್ ಪ್ರಶಸ್ತಿ ಹಾಗೂ ಇದರಿಂದ ಮಾಲಿನ್ಯ ಕಡಿಮೆ ಮಾಡಿದ್ದಕ್ಕಾಗಿ ಗ್ರೀನ್ ಫ್ಲೀಟ್ ಎಕ್ಸಲೆನ್ಸ್ ಪ್ರಶಸ್ತಿಯನ್ನು ಬಿಎಂಟಿಸಿ ಪಡೆದಿದೆ.

ಎಲೆಕ್ಟ್ರಿಕ್ ವಾಹನಗಳು (ಇವಿ) ಮತ್ತು ಚಾರ್ಜಿಂಗ್ ಮೂಲಸೌಕರ್ಯ ಕ್ಷೇತ್ರಗಳಲ್ಲಿನ ಅತ್ಯುತ್ತಮ ಸಾಧನೆಗಳನ್ನು ಗುರುತಿಸುವ ಕಾರ್ಯಕ್ರಮದಲ್ಲಿ ಬುಧವಾರ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ಕಾರ್ಯಕ್ರಮ ನಿರ್ದೇಶಕ ಅಭಿಜಿತ್ ಸಿನ್ಹಾ ಪ್ರಶಸ್ತಿ ಪ್ರದಾನ ಮಾಡಿದರು.

ಬಿಎಂಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕ (ಕಾರ್ಯಾಚರಣೆ) ಜಿ.ಟಿ. ಪ್ರಭಾಕರ ರೆಡ್ಡಿ, ಉಪ ಮುಖ್ಯ ಮೆಕ್ಯಾನಿಕಲ್‌ ಎಂಜಿನಿಯರ್‌ ಕೆ.ಎಸ್. ಚೈತ್ರಾ, ಸಾರ್ವಜನಿಕ ಸಂಪರ್ಕಾಧಿಕಾರಿ ಸುನೀತಾ ಜೆ. ಬಿಎಂಟಿಸಿ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.