ಬೆಂಗಳೂರು: ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು, ವಿದ್ಯುತ್ ಸಂಪರ್ಕದ ಕಡಿತದಿಂದ ತೊಂದರೆ ಅನುಭವಿಸುವುದನ್ನು ತಪ್ಪಿಸುವುದಕ್ಕಾಗಿ ಭಾನುವಾರವೂ(ಸೆ.1) ಬೆಸ್ಕಾಂ ಉಪ ವಿಭಾಗಗಳ ನಗದು ಪಾವತಿ ಕೇಂದ್ರಗಳು ತೆರೆದಿರಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ವಿದ್ಯುತ್ ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ(ಕೆಇಆರ್‌ಸಿ) ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಿದ್ದು, ಇಂದಿನಿಂದಲೇ(ಸೆ.1) ಈ ನಿಯಮ ಜಾರಿಯಾಗಲಿದೆ ಎಂದು ಬೆಸ್ಕಾಂ ತಿಳಿಸಿತ್ತು.
ಈ ಹಿನ್ನೆಲೆಯಲ್ಲಿ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಕಂಪನಿಯ ಉಪ ವಿಭಾಗಗಳ ನಗದು ಪಾವತಿ ಕೇಂದ್ರಗಳನ್ನು ಈ ಭಾನುವಾರವೂ ತೆರೆಯಲು ನಿರ್ಧರಿಸಿರುವುದಾಗಿ ಬೆಸ್ಕಾಂ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.