ADVERTISEMENT

ಬೆಂಗಳೂರು: ದಯಾನಂದ ಸಾಗರ್ ಕಾಲೇಜಿನಲ್ಲಿ ನಾಳೆ ಎಂಜಿನಿಯರಿಂಗ್ ಸಮಾವೇಶ

​ಪ್ರಜಾವಾಣಿ ವಾರ್ತೆ
Published 12 ಜುಲೈ 2024, 14:22 IST
Last Updated 12 ಜುಲೈ 2024, 14:22 IST
<div class="paragraphs"><p>ದಯಾನಂದ ಸಾಗರ್ ಎಂಜಿನಿಯರಿಂಗ್ ಕಾಲೇಜು</p></div>

ದಯಾನಂದ ಸಾಗರ್ ಎಂಜಿನಿಯರಿಂಗ್ ಕಾಲೇಜು

   

ಬೆಂಗಳೂರು: ದಯಾನಂದ ಸಾಗರ್ ಎಂಜಿನಿಯರಿಂಗ್ ಕಾಲೇಜು ಇದೇ ಶನಿವಾರ ತನ್ನ ಕ್ಯಾಂಪಸ್‌ನಲ್ಲಿ ಎಂಜಿನಿಯರಿಂಗ್ ಸಮಾವೇಶ ಹಮ್ಮಿಕೊಂಡಿದೆ. 

‘ಕೆಲಸದ ಭವಿಷ್ಯ, ಕೌಶಲ ಮತ್ತು ಚಲನಶೀಲತೆ’ ವಿಷಯದ ಮೇಲೆ ಈ ಸಮಾವೇಶ ಕೇಂದ್ರೀಕೃತವಾಗಿದ್ದು, ಉದ್ಯಮದ ಅಗತ್ಯತೆಗಳನ್ನು ಪೂರೈಸುವ ಉದ್ದೇಶವನ್ನು ಹೊಂದಿದೆ. ಯುವ ಪ್ರತಿಭೆಗಳನ್ನು ಪೋಷಿಸಲು ಮತ್ತು ತಂತ್ರಜ್ಞಾನ ಕ್ರಾಂತಿಯ ಬೇಡಿಕೆಗಳಿಗೆ ಅವರನ್ನು ಸಿದ್ಧಪಡಿಸಲು ಈ ಸಮಾವೇಶ ಸಹಕಾರಿಯಾಗಲಿದೆ. ಶಿಕ್ಷಣ, ಸಂಶೋಧನೆ ಹಾಗೂ ಉದ್ಯಮ ತಜ್ಞರು ಒಂದೇ ವೇದಿಕೆಯಲ್ಲಿ ಸಮಾಗಮ ಆಗಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ. 

ADVERTISEMENT

ಈ ಸಮಾವೇಶದಲ್ಲಿ ಉದ್ಯಮ ಕ್ಷೇತ್ರದ 50 ತಜ್ಞರು ಭಾಗವಹಿಸಿ, ವೃತ್ತಿಯ ಅನುಭವಗಳನ್ನು ಹಂಚಿಕೊಳ್ಳುತ್ತಾರೆ. ಉದ್ಯೋಗದ ಭರವಸೆ ಒದಗಿಸಲು ಈ ಸಮಾವೇಶ ಸಹಕಾರಿಯಾಗಲಿದೆ ಎಂದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.