ಬೆಂಗಳೂರು: ದೇಶದಲ್ಲೇ ಅತಿ ಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್ ವಾಹನಗಳ (ಇವಿ) ಜಾರ್ಜಿಂಗ್ ಸ್ಟೇಷನ್‌ಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಕೇಂದ್ರ ಇಂಧನ ಸಚಿವಾಲಯದ ಬ್ಯೂರೊ ಆಫ್ ಎನರ್ಜಿ ಎಫಿಷಿಯನ್ಸಿ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಿದೆ.
ವರದಿ ಪ್ರಕಾರ, 5,765 ಇವಿ ಚಾರ್ಜಿಂಗ್ ಸ್ಟೇಷನ್‌ಗಳೊಂದಿಗೆ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಮಹಾರಾಷ್ಟ್ರ(3,728) ಎರಡನೇ ಸ್ಥಾನ, ಉತ್ತರ ಪ್ರದೇಶ (1,989) ಮತ್ತು ದೆಹಲಿ (1,941) ನಂತರದ ಸ್ಥಾನದಲ್ಲಿವೆ.
ತಮಿಳುನಾಡಿನಲ್ಲಿ 1,413, ಕೇರಳ 1,212 ಮತ್ತು ರಾಜಸ್ಥಾನ 1,129, ಗುಜರಾತ್ 992, ತೆಲಂಗಾಣ 956, ಪಶ್ಚಿಮ ಬಂಗಾಳ 763, ಹರಿಯಾಣ 709, ಮತ್ತು ಆಂಧ್ರಪ್ರದೇಶದಲ್ಲಿ 601 ಚಾರ್ಜಿಂಗ್ ಸ್ಟ್ರೇಷನ್‌ಗಳಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 4,462 ಇವಿ ಚಾರ್ಜಿಂಗ್ ಸ್ಟೇಷನ್‌ಗಳಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಸ್ಟೇಷನ್‌ಗಳನ್ನು ಹೊಂದಿರುವ ಜಿಲ್ಲೆಯಾಗಿದೆ.
ಇವಿ ಚಾರ್ಜಿಂಗ್ ಸ್ಟೇಷನ್‌ಗಳಿಗೆ ಕೇಂದ್ರ ಸರ್ಕಾರದ ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ವೆಹಿಕಲ್ಸ್ (FAME) ಯೋಜನೆ, ಬೆಸ್ಕಾಂನ ಹೂಡಿಕೆ, ರಾಜ್ಯ ಸಾರಿಗೆ ಇಲಾಖೆಯಿಂದ ಹಸಿರು ಸೆಸ್ ನಿಧಿ ಮತ್ತು ಸಾರ್ವಜನಿಕ-ಖಾಸಗಿ ಸಹಭಾಗಿತ್ವದ (ಪಿಪಿಪಿ) ಹೂಡಿಕೆಗಳು ಸೇರಿದಂತೆ ವಿವಿಧ ಮೂಲಗಳಿಂದ ಆರ್ಥಿಕ ಬೆಂಬಲ ದೊರೆತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.