ಬೆಂಗಳೂರು: ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಮುಂದಿಟ್ಟಿದ್ದ ಬೇಡಿಕೆಗಳ ಪೈಕಿ 27 ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದ ಸಾರಿಗೆ ಸಚಿವರು ಈಗ ನಡಾವಳಿಯ ಪ್ರತಿಯನ್ನು ಕಳುಹಿಸಿಕೊಟ್ಟಿದ್ದಾರೆ. ಆದರೆ, ಅದರಲ್ಲಿ ಹಲವು ವಿಚಾರಗಳ ಬಗ್ಗೆ ಸ್ಪಷ್ಟತೆಯೇ ಇಲ್ಲ ಎಂದು ಒಕ್ಕೂಟದ ಅಧ್ಯಕ್ಷ ಎಸ್. ನಟರಾಜ್ ಶರ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಯಾವಾಗ ಅನುಷ್ಠಾನ ಎಂಬುದನ್ನು ನಮೂದಿಸಿಲ್ಲ. ವಿಶೇಷ ಅಡ್ವೊಕೇಟ್ ಜನರಲ್ ನೇಮಕ ಯಾವಾಗ ಎಂಬುದನ್ನು ಹೇಳಿಲ್ಲ. ಪರವಾನಗಿ ಪಡೆಯದ ಖಾಸಗಿ ಆ್ಯಪ್‌ಗಳ ಮೇಲೆ ಕ್ರಮ ಏನು ಎಂಬುದನ್ನು ತಿಳಿಸಿಲ್ಲ. ಮಿತಿ ಮೀರಿ ಅಧಿಕಾರ ಚಲಾಯಿಸುವ ಸಾರಿಗೆ ಇಲಾಖೆಯ ಹೆಚ್ಚುವರಿ ಕಮಿಷನರ್ ಬಗ್ಗೆ ಏನು ಕ್ರಮ ಕೈಗೊಂಡಿದ್ದಾರೆ ಎಂಬುದು ಗೊತ್ತಾಗಿಲ್ಲ ಎಂದು ತಿಳಿಸಿದ್ದಾರೆ.
‘ಬೆಂಗಳೂರು ನಗರ ಮುಷ್ಕರ ನಡೆಸುತ್ತಿದ್ದ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ನೀಡಿದ್ದ ಸಾರಿಗೆ ಸಚಿವರು ಎರಡು ತಿಂಗಳಲ್ಲಿ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದರು. ಇದು ನಡಾವಳಿಯಲ್ಲಿ ನಮೂದಾಗಿಲ್ಲ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.