ನೆಲಮಂಗಲ: ‘ಧರ್ಮ ಮತ್ತು ಭಾಷೆಯನ್ನು ಎಲ್ಲಿ ಬಳಕೆ ಮಾಡಬೇಕೊ ಅಲ್ಲಿ ಬಳಕೆ ಮಾಡಬೇಕು. ಪ್ರತಿಯೊಬ್ಬರು ಅವರ ಧರ್ಮವನ್ನು ನಂಬಿದ್ದಾರೆ. ಅವರ ಭಾವನೆ ಮೇಲೆ ಹೊಡೆಯುವ ಕೆಲಸ ಮಾಡಬಾರದು’ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟರು.
ಹೊಯ್ಸಳ ಪದವಿ ಪೂರ್ವ ಕಾಲೇಜಿನಿಂದ ಆಯೋಜಿಸಿದ್ದ ಸಮಾಲೋಚನಾ ಸಮಾರಂಭ ಹಾಗೂ ಕಲಾ ಉತ್ಸವ ಉದ್ಘಾಟಿಸಿ ಮಾತನಾಡಿದರು.
‘ಸಮಾಜ ತನ್ನ ಭಾವನೆಗಳನ್ನ ಬದಲಾಯಿಸಬೇಕು. ಹಿಜಾಬ್ ವಿಚಾರವಾಗಿ ಕೋರ್ಟ್ ತೀರ್ಪು ನೀಡಿದ್ದು, ಅದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಬಹುದು. ಅದನ್ನು ಬಿಟ್ಟು ಬಂದ್ ಮಾಡುವುದು ಸರಿಯಲ್ಲ. ನ್ಯಾಯಾಲಯದ ಮಾತಿಗೆ ಪ್ರತಿಯೊಬ್ಬರು ಬೆಲೆ ಕೊಡಬೇಕು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.