ADVERTISEMENT

ಸಂಗೊಳ್ಳಿ ರಾಯಣ್ಣ - ಹೊಸಪೇಟೆ ವಿಶೇಷ ರೈಲು ಸಂಚಾರ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2024, 15:16 IST
Last Updated 11 ಸೆಪ್ಟೆಂಬರ್ 2024, 15:16 IST
<div class="paragraphs"><p>ರೈಲು</p></div>

ರೈಲು

   

– ಪ್ರಜಾವಾಣಿ ಚಿತ್ರ

ಬೆಂಗಳೂರು: ಇಲ್ಲಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ-ಹೊಸಪೇಟೆ ನಿಲ್ದಾಣಗಳ ನಡುವೆ ಬಳ್ಳಾರಿ ಬೈಪಾಸ್ ಮಾರ್ಗದ ಮೂಲಕ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ನೈರುತ್ಯ ರೈಲ್ವೆ ವಿಸ್ತರಿಸಿದೆ.

ADVERTISEMENT

ಬೆಂಗಳೂರು-ಹೊಸಪೇಟೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೆಪ್ಟೆಂಬರ್‌ 13ರವರೆಗೆ ಹಾಗೂ ಹೊಸಪೇಟೆ–ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಸೆ.15 ಕಾರ್ಯಾಚರಿಸಲು ನಿರ್ಧರಿಸಲಾಗಿತ್ತು. ಈ ಕಾರ್ಯಾಚರಣೆಯನ್ನು ಮುಂದಿನ ಆದೇಶ ಬರುವವರೆಗೆ ವಿಸ್ತರಿಸಲಾಗಿದೆ. 

ಓಣಂ ರೈಲು ವಿಸ್ತರಣೆ: ಓಣಂ ಸಮಯದಲ್ಲಿ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ಸೆ.18ರವರೆಗೆ ಯಲಹಂಕ–ಎರ್ನಾಕುಲಂ ಗರೀಬ್‌ ರಥ  ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ವಿಶೇಷ ರೈಲು ಸಂಚಾರವನ್ನು ವಿಸ್ತರಿಸಲಾಗಿದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.