ADVERTISEMENT

ಬೆಂಕಿ ನಂದಿಸಲು ‘ಏರಿಯಲ್‌ ಲ್ಯಾಡರ್‌ ಸೌಲಭ್ಯ’: ಗೃಹ ಸಚಿವ ಜಿ.ಪರಮೇಶ್ವರ

ನಗರದಲ್ಲಿ ಅಗ್ನಿಶಾಮಕರ ನಿರ್ಗಮನ ಪಥಸಂಚಲನದಲ್ಲಿ ಗೃಹ ಸಚಿವರ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 11 ಜೂನ್ 2024, 16:21 IST
Last Updated 11 ಜೂನ್ 2024, 16:21 IST
<div class="paragraphs"><p>ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ವಿನಾಯಕ ಹುಣಸಿಕಟ್ಟಿ ಅವರಿಗೆ ಗೃಹ ಸಚಿವ ಜಿ.ಪರಮೇಶ್ವರ ಅವರು ಸರ್ವೋತ್ತಮ ಪ್ರಶಸ್ತಿ ಪ್ರದಾನ ಮಾಡಿದರು. </p></div>

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ವಿನಾಯಕ ಹುಣಸಿಕಟ್ಟಿ ಅವರಿಗೆ ಗೃಹ ಸಚಿವ ಜಿ.ಪರಮೇಶ್ವರ ಅವರು ಸರ್ವೋತ್ತಮ ಪ್ರಶಸ್ತಿ ಪ್ರದಾನ ಮಾಡಿದರು.

   

ಪ್ರಜಾವಾಣಿ ಚಿತ್ರ/ ಪ್ರಶಾಂತ್ ಎಚ್.ಜಿ.

ಬೆಂಗಳೂರು: ‘ಅವಘಡಗಳಲ್ಲಿ ಬೆಂಕಿ ನಂದಿಸಲು 90 ಮೀಟರ್‌ವರೆಗೆ ನೀರು ತಲುಪಿಸಬಹುದಾದ ಏರಿಯಲ್ ಲ್ಯಾಡರ್ ಸೌಲಭ್ಯವನ್ನು ಅಗ್ನಿಶಾಮಕ ದಳದ ವಾಹನಗಳಲ್ಲಿ ಅಳವಡಿಕೆ ಮಾಡಿಕೊಳ್ಳಲಾಗಿದೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

ADVERTISEMENT

ನಗರದಲ್ಲಿ ಮಂಗಳವಾರ ನಡೆದ ಮುಖ್ಯಮಂತ್ರಿ ಪದಕ ಪ್ರದಾನ ಸಮಾರಂಭ ಹಾಗೂ ಅಗ್ನಿಶಾಮಕರ ನಿರ್ಗಮನ ಪಥಸಂಚಲನದಲ್ಲಿ ಅವರು ಮಾತನಾಡಿದರು.

‘ಬಹುತೇಕ ರಾಜ್ಯಗಳಲ್ಲಿ ಏರಿಯಲ್ ಲ್ಯಾಡರ್ ಸೌಲಭ್ಯ ಇಲ್ಲ. ಮೊದಲ ಬಾರಿಗೆ ರಾಜ್ಯದಲ್ಲಿ ಅಳವಡಿಕೆ ಮಾಡಲಾಗಿದೆ. ಅಲ್ಲದೇ ಮೊದಲ ಬಾರಿಗೆ ಇಲಾಖೆಯ ವಾಹನಗಳಿಗೆ ಪೆಟ್ರೋಲ್ ಕಾರ್ಡ್ ಸವಲತ್ತು ಕಲ್ಪಿಸಲಾಗಿದೆ’ ಎಂದು ಹೇಳಿದರು.

‘ಪ್ರತಿ ಜಿಲ್ಲೆಯಲ್ಲೂ ಅಗ್ನಿಶಾಮಕದ ದಳದ ಕಚೇರಿ ಇರಬೇಕು ಎಂಬ ನಿಯಮವಿದೆ. ಆದರೆ, ರಾಜ್ಯ ಸರ್ಕಾರ ಪ್ರತಿ ತಾಲ್ಲೂಕಿನಲ್ಲೂ ಕಚೇರಿ ತೆರೆದಿದೆ’ ಎಂದು ಹೇಳಿದರು.

‘ರಾಜ್ಯದ ಅಗ್ನಿಶಾಮಕ ದಳ ರಾಷ್ಟ್ರ ಮಟ್ಟದಲ್ಲಿ ಮೆಚ್ಚುಗೆ ಪಡೆದಿದೆ. ಹೊಸದಾಗಿ ಇಲಾಖೆಗೆ ನೇಮಕವಾಗಿರುವ ಸಿಬ್ಬಂದಿಗೆ ‌ತರಬೇತಿ ನೀಡಲಾಗಿದೆ‘ ಎಂದು ಹೇಳಿದರು.

‘ದೇಶದಲ್ಲಿ ಎಲ್ಲರಿಗೂ ಒಂದೇ ಕಾನೂನು. ಯಾವುದೇ ಧರ್ಮ, ರಾಜಕೀಯ, ವ್ಯಕ್ತಿಗೆ ಕೆಲಸ ಮಾಡುವುದಿಲ್ಲ. ದೇಶಕ್ಕಾಗಿ ಕೆಲಸ ಮಾಡುತ್ತೇನೆ ಎಂದು ನಿಮಗೆ ಪ್ರಮಾಣ ಬೋಧನೆ ಮಾಡಲಾಗಿದೆ. ಅದೇ ನಿಟ್ಟಿನಲ್ಲಿ ತರಬೇತಿ ನೀಡಲಾಗಿದೆ’ ಎಂದು ಹೇಳಿದರು.

ಆಧುನಿಕ ಜಗತ್ತು ತಾಂತ್ರಿಕವಾಗಿ ಸಾಕಷ್ಟು ಬದಲಾವಣೆ ಕಂಡಿದೆ. ಅಗ್ನಿಶಾಮಕ ದಳ‌ ಮತ್ತು ತುರ್ತುಸೇವೆಯ ಐವತ್ತು ವರ್ಷಗಳ ಹಿಂದೆ ಸಿಬ್ಬಂದಿ ಕಾರ್ಯವೈಖರಿ ಬೇರೆ ಇತ್ತು; ಈಗ ಬದಲಾಗಿದೆ. ನಗರಗಳಲ್ಲಿ ದೊಡ್ಡ ಕಟ್ಟಡಗಳು ನಿರ್ಮಣವಾಗಿವೆ. ಅವಘಡಗಳು ಸಂಭವಿಸಿದಾಗ ಹೇಗೆ ನಿಭಾಯಿಸಬೇಕು ಎಂದು ತರಬೇತಿ ನೀಡಲಾಗಿದೆ. ತಾಂತ್ರಿಕ ಉಪಕರಣಗಳನ್ನು ಅಳವಡಿಸಿಕೊಳ್ಳಲಾಗುತ್ತಿದೆ’ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಮಂಗಳವಾರ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಗೃಹರಕ್ಷಕ ದಳ ಪೌರ ರಕ್ಷಣೆ ಹಾಗೂ ರಾಜ್ಯ ವಿಪತ್ತು ಸ್ಪಂದನಾ ಪಡೆ ಆಯೋಜಿಸಿದ್ದ ಮುಖ್ಯಮಂತ್ರಿ ಪದಕ ಪ್ರದಾನ ಹಾಗೂ ಅಗ್ನಿಶಾಮಕರ ನಿರ್ಗಮನ ಪಥ ಸಂಚಲನದಲ್ಲಿ ಪ್ರಶಿಕ್ಷಣಾರ್ಥಿಗಳು ಪಥಸಂಚಲನದಲ್ಲಿ ನಡೆಸಿದರು. ಪ್ರಜಾವಾಣಿ ಚಿತ್ರ/ ಪ್ರಶಾಂತ್ ಎಚ್.ಜಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.