ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆದಿರುವ ಬಗ್ಗೆ ದೂರು ದಾಖಲಿಸಲಾಗಿದೆ.
ನಕಲಿ ಖಾತೆ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಅ.11ರಂದು ಸಿಇಎನ್ ಪೊಲೀಸ್ ಠಾಣೆಯಲ್ಲಿ (ಕೇಂದ್ರ ವಿಭಾಗ) ಎಫ್‌ಐಆರ್ ದಾಖಲಿಸಲಾಗಿದೆ. ಸಾಮಾಜಿಕ ಜಾಲತಾಣಗಳ ವಂಚಕರು ಪಾಲಿಕೆಯ ಮುಖ್ಯ ಆಯುಕ್ತರ ಭಾವಚಿತ್ರ, ಹೆಸರು, ಹುದ್ದೆ ಮತ್ತು ಸಂಸ್ಥೆಯ ಹೆಸರನ್ನು ದುರುಪಯೋಗಪಡಿಸಿಕೊಂಡು ನಕಲಿ ಖಾತೆ ತೆರೆದಿದ್ದಾರೆ ಎಂದು ಮುಖ್ಯ ಆಯುಕ್ತರ ಪರವಾಗಿ ಸಾರ್ವಜನಿಕ ಸಂಪರ್ಕಾಧಿಕಾರಿ ಈರಣ್ಣ ಅವರು ದೂರು ನೀಡಿದ್ದಾರೆ.
ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ಮೂಲಕ ಪಾಲಿಕೆಯ ಅಧಿಕಾರಿ, ನೌಕರರು ಹಾಗೂ ಸಾರ್ವಜನಿಕರನ್ನು ವಂಚಿಸುವ ಸಾಧ್ಯತೆ ಇದ್ದು, ಖಾತೆ ತೆಗೆದುಹಾಕಬೇಕು. ನಕಲಿ ಖಾತೆ ಸೃಷ್ಟಿಸಿರುವ ವ್ಯಕ್ತಿಯ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.