ADVERTISEMENT

ನೇತಾಜಿ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಿ: ಶಿಕ್ಷಣ ತಜ್ಞ ಅಲ್ಲಮಪ್ರಭು ಬೆಟ್ಟದೂರು

​ಪ್ರಜಾವಾಣಿ ವಾರ್ತೆ
Published 28 ಜನವರಿ 2023, 19:13 IST
Last Updated 28 ಜನವರಿ 2023, 19:13 IST
   

ಬೆಂಗಳೂರು: ‘ವಿದ್ಯಾರ್ಥಿಗಳು ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ ತತ್ವಾದರ್ಶಗಳನ್ನು ಅರಿತು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಶಿಕ್ಷಣ ತಜ್ಞ ಅಲ್ಲಮಪ್ರಭು ಬೆಟ್ಟದೂರು ಕರೆ ನೀಡಿದರು.

ನಗರದ ಸ್ಕೌಟ್ಸ್‌ ಆ್ಯಂಡ್‌ ಗೈಡ್ಸ್‌ ಸಭಾಂಗಣದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್‌ ಅವರ 125ನೇ ಜನ್ಮ ದಿನಾಚರಣೆಯ ಪ್ರಯುಕ್ತ ಎಐಡಿಎಸ್‌ಒ ಹಮ್ಮಿಕೊಂಡಿದ್ದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ನೇತಾಜಿ ಅವರು ಸ್ವಾತಂತ್ರ್ಯ ಸಂಗ್ರಾಮದ ಬಹುದೊಡ್ಡ ನಾಯಕರಾಗಿದ್ದರು. ಸ್ವಾತಂತ್ರ್ಯ ಚಳವಳಿಯಲ್ಲಿ ಒಂದು ವೈಚಾರಿಕ ಮುನ್ನೋಟವನ್ನು ಹೊಂದಿದ್ದರು. ಮಹಿಳಾ ಸೈನ್ಯವನ್ನು ಕಟ್ಟಿ ಚಳವಳಿಯಲ್ಲಿ ಮಹಿಳೆಯರಿಗೂ ಕೂಡ ಪಾಲುದಾರಿಕೆಯನ್ನು ನೀಡಿದ್ದರು’ ಎಂದು ತಿಳಿಸಿದರು.

ADVERTISEMENT

ಹಂಪಿ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಮುರಿಗೆಪ್ಪ ಮಾತನಾಡಿ, ‘ಸುಭಾಷ್ ಚಂದ್ರ ಬೋಸ್‌ ಅವರ ಮುಖ್ಯ ಗುರಿ ಬ್ರಿಟಿಷರಿಂದ ಸ್ವಾತಂತ್ರ್ಯ ಪಡೆಯುವುದಾಗಿತ್ತು. ಜಾತಿ–ಧರ್ಮವನ್ನು ಮೀರಿ ರಾಷ್ಟ್ರೀಯತೆಯ ಭಾವನೆಗೆ ಗೌರವಿಸುವುದು ಅವರ ವೈಶಿಷ್ಟ್ಯವಾಗಿತ್ತು’ ಎಂದರು.

ಎಐಡಿಎಸ್‌ಒ ರಾಷ್ಟ್ರೀಯ ಅಧ್ಯಕ್ಷ ವಿ.ಎನ್. ರಾಜಶೇಖರ್, ರಾಜ್ಯ ಘಟಕದ ಅಧ್ಯಕ್ಷೆ ಅಶ್ವಿನಿ ಕೆ.ಎಸ್., ಕಾರ್ಯದರ್ಶಿ ಅಜಯ್ ಕಾಮತ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.