ADVERTISEMENT

ಬೆಂಗಳೂರು | ಕೌಟುಂಬಿಕ ಕಲಹ: ನರ್ಸಿಂಗ್‌ ವಿದ್ಯಾರ್ಥಿನಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 8 ಜುಲೈ 2024, 15:32 IST
Last Updated 8 ಜುಲೈ 2024, 15:32 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಹಾಸ್ಟೆಲ್‌ನಲ್ಲಿ ನೆಲೆಸಿದ್ದ ನರ್ಸಿಂಗ್‌ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದಿಯಾ ಮಂಡೋಲ್‌(21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. 

ADVERTISEMENT

‘ಪಶ್ಚಿಮ ಬಂಗಾಳದ ದಿಯಾ ಮಂಡೋಲ್‌ ಅವರು ಜಾಲಹಳ್ಳಿಯ ಮದರ್‌ ಥೆರೆಸಾ ನರ್ಸಿಂಗ್‌ ಕಾಲೇಜಿನಲ್ಲಿ ಓದುತ್ತಿದ್ದರು. ಎರಡು ದಿನಗಳ ಹಿಂದೆ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಲೇಜಿಗೆ ತೆರಳಿದ್ದ ಸ್ನೇಹಿತರು ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿದ್ದು ಗೊತ್ತಾಗಿತ್ತು’ ಎಂದು ಪೊಲೀಸರು ಹೇಳಿದರು.

‘ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದೆ’ ಎಂದು ಪೊಲೀಸರು ಹೇಳಿದರು.

ಜಾಲಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.