ADVERTISEMENT

ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅರ್ಜಿ: ರಾಜ್ಯ ಸರ್ಕಾರಕ್ಕೆ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 1 ಜುಲೈ 2024, 16:15 IST
Last Updated 1 ಜುಲೈ 2024, 16:15 IST
<div class="paragraphs"><p>ವಿಧಾನಸೌಧ </p></div>

ವಿಧಾನಸೌಧ

   

ಬೆಂಗಳೂರು: ಖಾಸಗಿ ಅನುದಾನರಹಿತ ಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿಗಳ ದಾಖಲಾತಿ, ಶುಲ್ಕ ಸಂಗ್ರಹಣೆಗೆ ಸಂಬಂಧಿಸಿದಂತೆ ಹೊರಡಿಸಲಾಗಿರುವ ಸುತ್ತೋಲೆ ಆಕ್ಷೇಪಿಸಿ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಸಂಬಂಧ ‘ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟ’ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಸೋಮವಾರ ವಿಚಾರಣೆ ನಡೆಸಿತು.

ADVERTISEMENT

ಕೆಲಕಾಲ ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್ ವಾದ ಆಲಿಸಿದ ನ್ಯಾಯಪೀಠ, ಶಿಕ್ಷಣ ಇಲಾಖೆ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು. ಅಂತೆಯೇ, ‘ಸುತ್ತೋಲೆಗೆ ತಡೆ ನೀಡಬೇಕು ಎಂಬ ಅರ್ಜಿದಾರರ ಮನವಿಯನ್ನು ಮುಂದಿನ ವಿಚಾರಣೆ ವೇಳೆ ಪರಿಗಣಿಸಲಾಗುವುದು’ ಎಂದು ಹೇಳಿ ವಿಚಾರಣೆ ಮುಂದೂಡಿತು.

‘ಆರ್‌ಟಿಇ ಕಾಯ್ದೆಯಡಿ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಅನ್ವಯ ಆಗುವುದಿಲ್ಲ. ಕರ್ನಾಟಕ ಶಿಕ್ಷಣ ಕಾಯ್ದೆ-1993ರ ಕಲಂ 141ಕ್ಕೆ ಇದು ವಿರುದ್ಧವಾಗಿದೆ’ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.