ನೆಲಮಂಗಲ: ತಾಲ್ಲೂಕಿನ ಕಳಲುಘಟ್ಟ ಪಂಚಾಯಿತಿ ಪಿಡಿಒ ಗೀತಾರಾಣಿ ಅವರು ಸೋಮವಾರ ಸಂಜೆ ಪಂಚಾಯಿತಿ ನಡಾವಳಿಗಳ ಕಡತವನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಬಳಿಗೆ ಕೊಂಡೊಯ್ಯುವ ಸಮಯದಲ್ಲಿ ವ್ಯಕ್ತಿಯೊಬ್ಬ, ಕಡತಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದಾನೆ.
ತಾಲ್ಲೂಕಿನ ಹನುಮಂತಪುರದ ನಮಸ್ತೆ ಬೆಂಗಳೂರು ಹೊಟೆಲ್ ಬಳಿ ಈ ಘಟನೆ ನಡೆದಿದೆ. ಕಳವು ಮಾಡಿರುವ ವ್ಯಕ್ತಿ ಗುಂಡೇನಹಳ್ಳಿ ಗ್ರಾಮದ ಅರುಣ್ ಕುಮಾರ್ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಗೀತಾರಾಣಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.