ಬೆಂಗಳೂರು: ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದ ಸಂತ್ರಸ್ತೆಯನ್ನು ಬುಧವಾರ ವಿವಿಧೆಡೆಗೆ ಕರೆದೊಯ್ದು ಸಂಜಯ್ ನಗರ ಠಾಣೆಯ ಪೊಲೀಸರು ಸ್ಥಳ ಮಹಜರು ನಡೆಸಿದರು.
ಅತ್ಯಾಚಾರ ಎಸಗಿದ್ದಾರೆ ಎನ್ನಲಾದ ಹೆಬ್ಬಾಳದ ನಿವಾಸ ಸೇರಿದಂತೆ ಕೆಲವು ಸ್ಥಳಗಳಿಗೆ ಸಂತ್ರಸ್ತೆಯನ್ನೂ ಕರೆದೊಯ್ದು ಪರಿಶೀಲಿಸಲಾಯಿತು. ಪ್ರಕರಣದ ಸಂಬಂಧ ಸಂತ್ರಸ್ತೆಯಿಂದ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ. ಸುಲಿಗೆ ಸಂಬಂಧ ವಿನಯ್ ಕುಲಕರ್ಣಿ ಅವರೂ ಪ್ರತಿ ದೂರು ನೀಡಿದ್ದಾರೆ. ಆ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.