ಬೆಂಗಳೂರು: ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಾಯಂಡಹಳ್ಳಿಯ ಮುಕ್ತಚಾರಿ ಬಡಾವಣೆಯ ಕೈಗಾರಿಕಾ ಪ್ರದೇಶದಲ್ಲಿದ್ದ ಪ್ಲಾಸ್ಟಿಕ್ ಗೋದಾಮಿನಲ್ಲಿ ಸಂಭವಿಸಿದ ಬೆಂಕಿ ಆಕಸ್ಮಿಕದಿಂದ ಗೋದಾಮಿನಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಕೈಗಾರಿಕಾ ಪ್ರದೇಶದಲ್ಲಿ ಪ್ಲಾಸ್ಟಿಕ್, ರಬ್ಬರ್ ಹಾಗೂ ಚೀಲದ ಗೋದಾಮಗಳಿವೆ. ಮಂಗಳವಾರ ತಡರಾತ್ರಿ ಪ್ಲಾಸ್ಟಿಕ್ ಗೋದಾಮಿನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿತ್ತು. ನಂತರ, ಇತರೆ ಗೋದಾಮುಗಳಿಗೂ ಬೆಂಕಿ ವ್ಯಾಪಿಸಿತ್ತು ಎಂದು ಮೂಲಗಳು ತಿಳಿಸಿವೆ.
ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಅಗ್ನಿಶಾಮಕದಳದ ಸಿಬ್ಬಂದಿ ತಿಳಿಸಿದ್ದಾರೆ.
ಗೋದಾಮಿನಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ. ಸದ್ಯಕ್ಕೆ ನಷ್ಟದ ಅಂದಾಜು ತಿಳಿದಿಲ್ಲ. ಅಗ್ನಿಶಾಮಕದ ಆರು ವಾಹನಗಳು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಲು ಯಶಸ್ವಿಯಾಗಿವೆ.
ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.