ಬೆಂಗಳೂರು: ಮಲ್ಲೇಶ್ವರ ಠಾಣೆ ವ್ಯಾಪ್ತಿಯಲ್ಲಿ ಮನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮನೆಯಿಂದ ಹೊರಬರಲು ಸಾಧ್ಯವಾಗದೇ ಮೇರಿ (55) ಎಂಬುವರು ಸಜೀವವಾಗಿ ದಹನವಾಗಿದ್ದಾರೆ.
ಮಂತ್ರಿ ಸ್ಕ್ವೇರ್ ಮಾಲ್ ಹಿಂಭಾಗದಲ್ಲಿರುವ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸುತ್ತಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣವೇನು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ.
ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಅನುಮಾನವಿದ್ದು, ಬೆಸ್ಕಾಂ ಅಧಿಕಾರಿಗಳೂ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.