ADVERTISEMENT

ಗೋದಾಮಿನಲ್ಲಿ ಬೆಂಕಿ: ಅಕ್ಕಪಕ್ಕದ ಮನೆಗಳಿಗೆ ಹಾನಿ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2024, 23:30 IST
Last Updated 26 ಫೆಬ್ರುವರಿ 2024, 23:30 IST
ಅಗ್ನಿಗೆ ಆಹುತಿಯಾದ ಗೋದಾಮು
ಅಗ್ನಿಗೆ ಆಹುತಿಯಾದ ಗೋದಾಮು   

ಕೆಂಗೇರಿ: ಕೆಂಗೇರಿ ಉಪ ನಗರದಲ್ಲಿರುವ ಪ್ಲಾಸ್ಟಿಕ್ ಸಾಮಗ್ರಿ ಹಾಗೂ ಬಟ್ಟೆ ಸಂಗ್ರಹ ಗೋದಾಮವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಗೋದಾಮಿನಲ್ಲಿದ್ದ ಬಟ್ಟೆಗಳು ಸುಟ್ಟು ಕರಕಲಾಗಿವೆ. ಅಕ್ಕ–ಪಕ್ಕದ ಮನೆಗಳಿಗೂ ಹಾನಿಯಾಗಿದೆ.

ಹೊಯ್ಸಳ ವೃತ್ತ ಬಳಿ ರಾಘವೇಂದ್ರ ಎಂಬುವವರು ಗೋದಾಮು ನಿರ್ಮಿಸಿ ಬಟ್ಟೆ ಹಾಗೂ ಪ್ಲಾಸ್ಟಿಕ್ ಸಾಮಗ್ರಿ ವ್ಯಾಪಾರ ಮಾಡುತ್ತಿದ್ದರು. ಬಿಬಿಎಂಪಿಯಿಂದ ಯಾವುದೇ ಅನುಮತಿ ಪಡೆದಿರಲಿಲ್ಲ. ಇದೇ ಗೋದಾಮಿಗೆ 2022ರಲ್ಲಿ ಬಿಬಿಎಂಪಿಯವರು ಬೀಗ ಜಡಿದಿದ್ದರು. ಕೆಲ ತಿಂಗಳ ನಂತರ ಪುನಃ ಗೋದಾಮು ತೆರೆದು ವ್ಯಾಪಾರ ನಡೆಸಲಾಗುತ್ತಿತ್ತು ಎಂದು ಸ್ಥಳೀಯರು ಹೇಳಿದರು.

‘ಗೋದಾಮಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಬೆಂಕಿಯ ತೀವ್ರತೆಗೆ ಅಕ್ಕ–ಪಕ್ಕದ ಎರಡು ಮನೆಗಳಿಗೆ ಹಾನಿಯಾಗಿದೆ.‌ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ’ ಎಂದರು.

ADVERTISEMENT

‘ನಿವೇಶನ ಮಾಲೀಕರು, ಗೋದಾಮು ಮಾಲೀಕರ ನಿರ್ಲಕ್ಷ್ಯದಿಂದ ಬೆಂಕಿ ಅವಘಡ ಸಂಭವಿಸಿದೆ’ ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.